Site icon Kundapra.com ಕುಂದಾಪ್ರ ಡಾಟ್ ಕಾಂ

ಪತ್ರಕರ್ತ ಸೋಮಶೇಖರ ಪಡುಕೆರೆ ಅವರಿಗೆ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಹಿರಿಯ ಕ್ರೀಡಾ ಪತ್ರಕರ್ತ ಸೋಮಶೇಖರ ಪಡುಕೆರೆ ಅವರು 2025ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸೋಮಶೇಖರ್‌ ಅವರು ಪತ್ರಿಕೋದ್ಯಮದಲ್ಲಿ ಸುಮಾರು ಮೂರು ದಶಕಗಳ ಅನುಭವ ಹೊಂದಿದ್ದಾರೆ. ಪ್ರಸ್ತುತ ಇವರು ಕನ್ನಡದ ಮೊದಲ ಕ್ರೀಡಾ ವೆಬ್‌ಸೈಟ್ sportsmail.net ನ ಸಂಸ್ಥಾಪಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಎ ಪದವೀಧರರಾದ ಅವರು ಈ ಹಿಂದೆ ಅವರು ಮುಂಬೈ ಹಾಗೂ ಕರ್ನಾಟಕದಲ್ಲಿ  ‘ಟೈಮ್ಸ್ ಆಫ್ ಇಂಡಿಯಾ’ ಮತ್ತು ‘ಕನ್ನಡ ಪ್ರಭ’ ಸೇರಿದಂತೆ ವಿವಿಧ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

ಅವರು ಕಬಡ್ಡಿ, ಫುಟ್‌ಬಾಲ್, ಕ್ರಿಕೆಟ್ ಸೇರಿದಂತೆ ವಿವಿಧ ಕ್ರೀಡೆಗಳ ಬಗ್ಗೆ ಆಳವಾದ ಜ್ಞಾನ ಹೊಂದಿದ್ದು,‌ ತಮ್ಮ ವರದಿಗಳ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಇದನ್ನೂ ಓದಿ
► ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್‌ ಆಚಾರ್ಯ ಅವರಿಗೆ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ – https://kundapraa.com/?p=94758 .

Exit mobile version