Site icon Kundapra.com ಕುಂದಾಪ್ರ ಡಾಟ್ ಕಾಂ

ಸಿಎಂಎ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
ಇನ್‌ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟಿಂಗ್ ಆಫ್ ಇಂಡಿಯಾ ನಡೆಸುವ ಸಿಎಂಎ ಫೌಂಡೇಶನ್, ಡಿಸೆಂಬರ್ 2025ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ.

ಪ್ರಗತಿ, ದೀಕ್ಷಿತಾ, ಐಶ್ವರ್ಯ, ತಿಲಕ್ ಹಾಗೂ ಶಬ್ದಿಕಾ ಪೂಜಾರಿ ಉತ್ತೀರ್ಣರಾಗಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವಿ-ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version