ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜೆಸಿಐ ಹಾಲಾಡಿ ವಾರಾಹಿ ಇದರ ವತಿಯಿಂದ ಸ್ವಾಮಿ ವಿವೇಕಾನಂದರ ದಿನಾಚರಣೆ ಅಂಗವಾಗಿ ಯುವ ದಿನಾಚರಣೆ ಕಾರ್ಯಕ್ರಮ ಹಾಲಾಡಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಿತು.
ಮಂಜುಳಾ ಶೆಟ್ಟಿ ಅವರು ಜೆಸಿ ವಾಣಿಯನ್ನು ವಾಚಿಸುವುದರೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಜೆಸಿ ಹಾಲಾಡಿ ವಾರಾಹಿ ಘಟಕದ ಅಧ್ಯಕ್ಷರಾದ ಜೆಸಿ ಪ್ರದೀಪ್ ಹಾಲಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರು ನಾರಾಯಣ ಕುಲಾಲ್ ಮುಖ್ಯ ಅತಿಥಿ ನೆಲೆಯಲ್ಲಿ ಉಪಸ್ಥಿತರಿದ್ದು ಸ್ವಾಮಿ ವಿವೇಕಾನಂದರ ಜೀವನವನ್ನು ವಿವರಿಸಿದರು. ಬ್ರೈಟ್ ಪರ್ಲ್ ಶಾಲಾ ಶಿಕ್ಷಕಿ ಆಶಾ ರಾಜೀವ್ ಕುಲಾಲ್ ವಿವೇಕಾನಂದರ ಶಿಸ್ತು ಹಾಗೂ ಸಾಧನೆಯ ಬಗ್ಗೆ ಮಕ್ಕಳಿಗೆ ಅರ್ಥೈಸಿದರು.

ವಿವೇಕಾನಂದರ ಜೀವನ ಚರಿತ್ರೆ ಬಗ್ಗೆ ಭಾಷಣ ಸ್ಪರ್ಧೆಯನ್ನು ಏರ್ಪಡಿಸಿ ಉತ್ತಮ ಭಾಷಣ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು ಹಾಗೂ ಎಲ್ಲಾ ಮಕ್ಕಳಿಗೆ ಸಿಹಿತಿಂಡಿಯನ್ನು ವಿತರಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಜೆಸಿಐ ಶಂಕರನಾರಾಯಣ ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಪ್ರವೀಣ್ ಬಾಳೆಕೊಡ್ಲು , ಲೇಡಿ ಜೆಸಿ ಅವಶ್ಯ ಶೆಟ್ಟಿ, ಉಪಾಧ್ಯಕ್ಷರಾದ ಗುರುಪ್ರಸಾದ್ ಶೆಟ್ಟಿ, ಕೃಷ್ಣ ಭಟ್, ಉದಯ್ ಗೋರಾಜೆ, ಶಾಲಾ ಶಿಕ್ಷಕಿ ಜ್ಯೋತಿ, ಅಖಿಲಾ ಉಪಸ್ಥಿತರಿದ್ದರು.
ದೀಪಾ ಶೆಟ್ಟಿ ಅವರು ಪ್ರಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಜೆಸಿಐ ಅದ್ಯಕ್ಷ ಪ್ರದೀಪ್ ಹಾಲಾಡಿ ಸ್ವಾಗತಿಸಿ, ಜೆಸಿಐ ಕಾರ್ಯದರ್ಶಿ ಅಶೋಕ್ ಹಾಲಾಡಿ ಧನ್ಯವಾದ ಸಲ್ಲಿಸಿದರು.