ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರೆಡ್ ಕ್ರಾಸ್ ಮಾನವೀಯ ನೆಲೆಯಲ್ಲಿ ಕೆಲಸ ಮಾಡುವ ದೊಡ್ಡ ಸಂಸ್ಥೆ. ಬೇರೆ ಸಂಸ್ಥೆಗಳಿಂದ ಭಿನ್ನವಾಗಿರುವ ರೆಡ್ ಕ್ರಾಸ್ ದೇಶದ ಉದ್ದಗಲಕ್ಕೂ ಹಲವಾರು ಜನಪರ. ಜನಹಿತ ಕಾರ್ಯಗಳನ್ನು ಮಾಡಿದೆ. ರೆಡ್ ಕ್ರಾಸ್ ಸಂಸ್ಥೆಯ ತತ್ವವನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲ್ಲೂಕು ಘಟಕದ ಚೇರ್ ಮೆನ್ ಜಯಕರ್ ಶೆಟ್ಟಿ ಅಭಿಪ್ರಾಯಪಟ್ಟರು.
ಅವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲ್ಲೂಕು ಘಟಕ, ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಸರೆಯಲ್ಲಿ ನಡೆದ ಪ್ರಥಮ ಚಿಕಿತ್ಸೆ ಮತ್ತು ಆರೋಗ್ಯ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿ ಡಾ. ಸೋನಿ ಡಿಕಾಸ್ಟ್ ಅವರು ಪ್ರಥಮ ಚಿಕಿತ್ಸೆ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಪ್ರಥಮ ಚಿಕಿತ್ಸೆ ಹೇಗೆ ಮಾಡುವುದು ಅದರ ಪ್ರಥಮ ಹಂತದ ಕಾರ್ಯಗಳು ಯಾವುವು, ತೆಲೆಸುತ್ತಿ ಬಿದ್ದವ್ಯಕ್ತಿಗೆ ಯಾವ ರೀತಿ ಪ್ರಾಥಮಿಕ ಹಂತದಲ್ಲಿ ಪ್ರಥಮ ಚಿಕಿತ್ಸೆ ನೀಡಬೇಕು, ಕರೆಂಟ್ ಶಾಕ್ ಹೊಡೆದ ವ್ಯಕ್ತಿಗಳನ್ನು ಯಾವ ರೀತಿ ಪ್ರಥಮ ಚಿಕಿತ್ಸೆ ನೀಡಬೇಕು ಎಂಬ ಹಲವು ವಿಷಯಗಳ ಕುರಿತು ಅರ್ಥಪೂರ್ಣ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲ್ಲೂಕು ಘಟಕದ ಟ್ರಸರರ್ ಶಿವರಾಮ್ ಶೆಟ್ಟಿ, ಕಾಲೇಜಿನ ಉಪಪ್ರಾಂಶುಪಾಲರಾದ ರಮೇಶ್ ಪೂಜಾರಿ, ಹೆಮ್ಮಾಡಿಯ ಪ್ರಗತಿ ಮಹಿಳಾ ವಿವಿದೋದ್ದೇಶ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕರಾದ ರಾಘವೇಂದ್ರ ಕುಲಾಲ್ ಹೆಮ್ಮಾಡಿ ಉಪಸ್ಥಿತರಿದ್ದರು.
ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ ಸ್ವಾಗತಿಸಿದರು. ಉಪನ್ಯಾಸಕರಾದ ಅಲ್ತಾರು ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.