ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಜಿಲ್ಲಾಡಳಿತದ ನಿರ್ದೇಶನದಂತೆ ಬೈಂದೂರು ಉತ್ಸವದ ಪ್ರಯುಕ್ತ ಪ್ರತಿ ಗ್ರಾಮ ಪಂಚಾಯತ್‌ನಲ್ಲೂ ಗ್ರಾಮೋತ್ಸವ ಆಯೋಜಿಸಿದ್ದು ಇದರ ಮೂಲಕ ವಿವಿಧ ಇಲಾಖೆಗಳ ಯೋಜನೆಗಳ ಮಾಹಿತಿ ಮತ್ತು ಅನುಕೂಲಗಳನ್ನು ನೇರವಾಗಿ ಪಡೆಯುವ ಅವಕಾಶ ದೊರಕಿದಂತಾಗಿದೆ. ಈ ಉತ್ಸವ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳ್ಳಲಿ ಹಾಗೂ ಈ ಉತ್ಸವಗಳು ಮನೋರಂಜನೆಯ ಜೊತೆಗೆ ಬೈಂದೂರು ಅಭಿವೃದ್ದಿಗೆ ಮುನ್ನುಡಿ ಆಗಲಿ ಎಂದ ಶಿರೂರು ಗ್ರಾಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ಹೇಳಿದರು.
ಅವರು ಇಲ್ಲಿನ ಶಿರೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಅವರಣದಲ್ಲಿ ಶಿರೂರು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಆರೋಗ್ಯ, ಕೃಷಿ, ಪಶು ಸಂಗೋಪನಾ, ಅರಣ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ತೋಟಗಾರಿಕೆ ಹಾಗೂ ಬ್ಯಾಂಕಿಂಗ್ ಇಲಾಖೆಯ ಸಹಭಾಗಿತ್ವದಲ್ಲಿ ಭಾನುವಾರ ನಡೆದ ಶಿರೂರು ಗ್ರಾಮೋತ್ಸವ ಹಾಗೂ ಆರೋಗ್ಯ ಮೇಳ ಉದ್ಘಾಟಿಸಿ ಮಾತನಾಡಿದರು.

ಬೈಂದೂರು ಉತ್ಸವದ ಸಂಚಾಲಕ ಗಣೇಶ ಗಾಣಿಗ ಉಪ್ಪುಂದ, ಗ್ರಾಪಂ ಸದಸ್ಯರಾದ ರವೀಂದ್ರ ಶೆಟ್ಟಿ ಆರ‍್ಮಕ್ಕಿ, ಬಾಬು ಮೊಗೇರ್ ಅಳ್ವೆಗದ್ದೆ, ಉಷಾ ಜನಾರ್ದನ ಗಾಣಿಗ, ಪ್ರೇಮಾ ಮೊಗೇರ್, ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಮಂಜುನಾಥ ಪೈ, ತುಳಸಿದಾಸ್ ಮೊಗೇರ್, ಕಾಲೇಜಿನ ಪ್ರಾಂಶುಪಾಲ ದೇವೇಂದ್ರ ಕೆ. ಮೊಗೇರ್, ಶೌರ್ಯ ವಿಪತ್ತು ಘಟಕದ ಸದಸ್ಯ ಗಿರೀಶ್ ಮೇಸ್ತ, ಸುಬ್ರಾಯ ನಾಯ್ಕ, ರವೀಂದ್ರ ಶೆಟ್ಟಿ ಹೊನ್ಕೇರಿ, ದಿನೇಶ್ ಕುಮಾರ್ ಶಿರೂರು, ನಾಗರಾಜ ಪ್ರಭು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ರಶ್ಮೀತಾ, ಮೋಹನ್ ರೇವಣ್ಕರ್, ಸಂಜೀವಿನ ಸಂಘದ ಅಧ್ಯಕ್ಷೆ ಜ್ಯೋತಿ ಮೊಗೇರ್ ಉಪಸ್ಥಿತರಿದ್ದರು.
ತಾಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ ಪ್ರಾಸ್ತಾವಿಸಿದರು. ಗ್ರಾಪಂ ಅಭಿವೃದ್ದಿ ಅಧಿಕಾರಿ ರಾಜೇಂದ್ರ ಶೆಟ್ಟಿ ಸ್ವಾಗತಿಸಿ, ಶಿಕ್ಷಕರಾದ ಶ್ರೀಕಾಂತ್ ಕಾಮತ್ ಕಾರ್ಯಕ್ರಮ ನಿರೂಪಿಸಿ, ರಾಮನಾಥ ಪಿ. ಮೇಸ್ತ ವಂದಿಸಿದರು. ಉಚಿತ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ, ಸಾಕು ನಾಯಿಗಳಿಗೆ ಹಾಗೂ ಜಾನುವಾರುಗಳಿಗೆ ಲಸಿಕೆ ಹಾಗೂ ಕೃಷಿ ಆವಿಷ್ಕಾರದ ಕುರಿತು ಇಲಾಖಾ ವತಿಯಿಂದ ವಿವಿಧ ಮಾಹಿತಿಗಳನ್ನು ನೀಡಲಾಯಿತು.