ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಶಿರೂರು ಕರಾವಳಿ ಕಡಲ-ತಡಿಯಲ್ಲಿ ರೋಟರಿ ಕ್ಲಬ್ ಬೈಂದೂರಿನ ಕುಟುಂಬ ಸಮ್ಮಿಲನ ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು.
ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ಡಾ. ಉಮೇಶ್ ಪುತ್ರನ್ ಮಾತನಾಡಿ, ‘ರೋಟರಿ ಸಂಸ್ಥೆಯು ವಿಶ್ವಶಾಂತಿಗಾಗಿ ನಿರಂತರವಾಗಿ ಶ್ರಮಿಸುತ್ತಿದೆ. ರೋಟರಿಯ ಅಂತರರಾಷ್ಟ್ರೀಯ ಬಾಂಧವ್ಯ ನೀತಿಗಳು ಜಾಗತಿಕ ಮಟ್ಟದಲ್ಲಿ ಖ್ಯಾತಿ ಪಡೆದಿದೆ. ಸಾಮಾಜಿಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ, ರೋಟರಿ ಕ್ಲಬ್ ಜನಮುಖಿ ಕಾರ್ಯ ಯೋಜನೆಗಳನ್ನು ಅನುಷ್ಠಾನ ಮಾಡುತ್ತಾ ಬಂದಿದೆ ಎಂದರು.

ಹ್ಯಾಟ್ರಿಕ್ ಡಿಸ್ಟಿಕ್ ಕಲ್ಬರಲ್ ಚಾಂಪಿಯನ್ ಪ್ರಶಸ್ತಿ ಮುಡಿಗೇರಿಸಿಕೊಂಡ ಬೈಂದೂರು ರೋಟರಿಯ ಅಧ್ಯಕ್ಷ- ಕಾರ್ಯದರ್ಶಿ ಅವರನ್ನು, ರೋಟರಿ ಟ್ರಸ್ಟ್ ಪರವಾಗಿ ಟ್ರಸ್ಟ್ ಅಧ್ಯಕ್ಷ ಕೆ. ಬಾಬು ಶೆಟ್ಟಿ ಗೌರವಿಸಿದರು. ಕಾರ್ಯಕ್ರಮದ ಪ್ರಾಯೋಜಕರಾದ ಲಕ್ಷ್ಮಿ ಪ್ರಕಾಶ್ – ದೀಪಿಕಾ ದಂಪತಿಯನ್ನು ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು. 2026- 27ನೇ ಸಾಲಿನ ಅಧ್ಯಕ್ಷರಾಗಿ ಅರುಣ್ ಕುಮಾರ್ ಶಿರೂರು, 2027-28ನೇ ಸಾಲಿನ ಅಧ್ಯಕ್ಷರಾಗಿ ಸತೀಶ್ ಶೆಟ್ಟಿ ಸೂರ್ಕುಂದ ಆಯ್ಕೆಯಾದರು.
ರೋಟರಿ ಕ್ಲಬ್ ಬೈಂದೂರು ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಉಪ್ಪುಂದ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಗವರ್ನರ್, ಐ. ನಾರಾಯಣ್, ಜೋನಲ್ ಟ್ರೈನರ್ ಜೆಪಿ ಶೆಟ್ಟಿ, ರೋನಲ್ ಲೆಫ್ಟಿನೆಂಟ್ ಪ್ರಸಾದ್ ಪ್ರಭು ಉಪಸ್ಥಿತರಿದ್ದರು.
ಪೂರ್ಣಿಮಾ ಪೈ ಪ್ರಾರ್ಥಿಸಿದರು. ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ವಂದಿಸಿದರು. ಎಚ್. ಉದಯ ಆಚಾರ್ಯ ನಿರೂಪಿಸಿದರು. ಕುಟುಂಬ ಸಮ್ಮಿಲನದ ಅಂಗವಾಗಿ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಮನೋರಂಜನಾ ಚಟುವಟಿಕೆಗಳನ್ನು ಆಯೋಜಿಸಲಾಗಿದೆ.