Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಉಚಿತ ನೇತ್ರ ತಪಾಸಣೆ ಮತ್ತು ಶ್ರವಣ ದೋಷ ತಪಾಸಣಾ ಶಿಬಿರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ದೃಷ್ಟಿ ದೋಷ ಮತ್ತು ಶ್ರವಣ ದೋಷ ಇದ್ದವರು ಕಾಲಕಾಲಕ್ಕೆ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು. ದೃಷ್ಟಿ ದೋಷ ಮತ್ತು ಶ್ರವಣ ದೋಷ ಇದ್ದವರಿಗೆ ಸರಕಾರದಿಂದ ವಿವಿಧ ಸೌಲಭ್ಯಗಳಿದ್ದು, ಇದನ್ನು ಪಡೆದುಕೊಂಡು ಕಣ್ಣಿನ ಮತ್ತು ಶ್ರವಣ ದೋಷದ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು ಎಂದು ಉಡುಪಿ ಜಿಲ್ಲಾಸ್ಪತ್ರೆಯ ರೇಡಿಯೊಲೋಜಿಸ್ಟ್ ಸಮೀಕ್ಷಾ ಡಿ. ರಾವ್ ಹೇಳಿದರು.

ಅವರು ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ, ಗ್ರಾಮ ಪಂಚಾಯತ್ ಗಂಗೊಳ್ಳಿ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಜರಗಿದ ಉಚಿತ ನೇತ್ರ ತಪಾಸಣೆ ಮತ್ತು ಶ್ರವಣ ದೋಷ ತಪಾಸಣಾ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ, ಜಿಲ್ಲಾಸ್ಪತ್ರೆಯ ನೇತ್ರ ತಜ್ಞ ಡಾ. ಅಜಯ್ ತಿವಾರಿ, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ, ಆಸ್ಪತ್ರೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಮೊದಲಾದವರು ಉಪಸ್ಥಿತರಿದ್ದರು.

ಕೃಷ್ಣ ಪೂಜಾರಿ ಸ್ವಾಗತಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಶುಶ್ರೂಷಕಿ ಶೋಭಾ ವಂದಿಸಿದರು.

Exit mobile version