ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಿಂದೂ ಸಂಗಮ ಆಯೋಜನ ಸಮಿತಿ ಕುಂದಾಪುರ ಇವರ ನೇತೃತ್ವದಲ್ಲಿ ಫೆಬ್ರವರಿ 01 ರಂದು ಕುಂದಾಪುರ ನಗರದಲ್ಲಿ ಬೃಹತ್ ಹಿಂದೂ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದರ ಪೂರ್ವಭಾವಿ ಸಭೆಯು ಕುಂದಾಪುರದ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದಲ್ಲಿ ನೆರವೇರಿತು.
ಪೂರ್ವಭಾವಿ ಸಭೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಹಿಂದೂ ಜಾಗೃತಿ ಸಂಗಮ ದೇಶದಾದ್ಯಂತ ನಡೆಯುತ್ತಿದೆ. ಹಿಂದೂ ಸಮಾಜ ಬಾಂಧವರನ್ನು ಒಗ್ಗೂಡಿಸುವ ಜೊತೆಗೆ ಜಾಗ್ರತ ಸಮಾಜಕ್ಕೆ ಮುನ್ನಡಿ ಇಡುವ ದೃಷ್ಟಿಯಿಂದ ಎಲ್ಲರೂ ಒಂದೇ ಮನಸ್ಸಿನಿಂದ ಆಗಮಿಸಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಸಕರು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಮಾತನಾಡಿ, ಪಕ್ಷದ ಹಾಗೂ ಅನನ್ಯ ಜವಾಬ್ದಾರಿಯ ಪ್ರಮುಖರು ಮತ್ತು ಕಾರ್ಯಕರ್ತರು ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಿಳಿಸಿದ್ದಾರೆ.
ಹಿಂದೂ ಸಂಗಮ ಆಯೋಜನ ಸಮಿತಿ ಕುಂದಾಪುರ ತಾಲೂಕು ಸಂಯೋಜಿಕಿ ಸ್ವರ್ಣ ಕುಂದಾಪುರ ಮಾತನಾಡಿ, ಕಾರ್ಯಕ್ರಮದ ರೂಪರೇಶಿಗಳ ಬಗ್ಗೆ ಸಮಗ್ರವಾಗಿ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್. ಹಿಂದು ಸಂಗಮ ಕಾರ್ಯಕ್ರಮದ ನಗರದ ಸಂಚಾಲಕರದ ಸತೀಶ್ ಶೆಟ್ಟಿ , ಪ್ರಕಾಶ್ ಪೂಜಾರಿ, ಕುಂದಾಪುರ ನಗರ ಸಹ ಸಂಯೋಜಕರು, ಕುಂದಾಪುರ ಪುರಸಭಾ ಮಾಜಿ ಸದಸ್ಯರು, ಕುಂದಾಪುರ ನಗರದ ಬೂತ್ ಮಟ್ಟದ ಪ್ರಮುಖರು, ಪಕ್ಷದ ಮುಖಂಡರು, ಹಿಂದೂ ಸಂಘಟನೆಯ ಸ್ವಯಂಸೇವಕರು ಇನ್ನಿತರರು ಉಪಸ್ಥಿತರಿದ್ದರು.
ಸುರೇಂದ್ರ ಕಾಂಚನ್ ಸಂಗಮ್ ಕಾರ್ಯಕ್ರಮವನ್ನು ನಿರೂಪಿಸಿದರು. ರಾಜೇಶ್ ಕಾವೇರಿ ಕಾರ್ಯಕ್ರಮದ ನಿಬಂಧನೆಗಳ ಬಗ್ಗೆ ಮಾಹಿತಿ ನೀಡಿದರು.