ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ಸ್ಥಳೀಯ ಸಂಘಸಂಸ್ಥೆಗಳ ಸಹಯೋಗದೊಂದಿಗೆ 288ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನದ ಅಂಗವಾಗಿ ಕುಂಭಾಶಿ ಆನೆಗುಡ್ಡೆ ವಿನಾಯಕ ದೇಗುಲ ಪರಿಸರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಕಾರ್ಯಕ್ರಮ ಭಾನುವಾರ ಜರಗಿತು.

ದೇಗುಲದ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ, ದೇಗುಲದ ಪ್ರಭಂಧಕ ನಟೇಶ್ ಕಾರಂತ್ ಸ್ವಚ್ಛತಾ ಕಾರ್ಯ ಹಮ್ಮಿಕೊಂಡ ಪಂಚವರ್ಣ ಸಂಘಟನೆಯನ್ನು ಗುರುತಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಸಂಘದ ಪೂರ್ವಾಧ್ಯಕ್ಷ ಗಿರೀಶ್ ಆಚಾರ್, ಪಂಚವರ್ಣ ಮಹಿಳಾಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.