Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಮಹತ್ವದ್ದು. ವಿದ್ಯಾರ್ಥಿ ದೆಸೆಯಲ್ಲಿಯೇ ದೇಶಾಭಿಮಾನದ ಮೌಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡಾಗ ಸದೃಢ ರಾಷ್ಟç ನಿರ್ಮಾಣ ಸಾಧ್ಯ ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ ಹೇಳಿದರು.

ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 77ನೇ ಗಣರಾಜ್ಯೋತ್ಸವದ ಫಥ ಸಂಚಲನದ ಗೌರವವನ್ನು ಸ್ವೀಕರಿಸಿ, ಧ್ವಜಾರೋಹಣ ಮಾಡಿ ಮಾತನಾಡಿದರು.

ಭಾರತೀಯ ಸೇನೆಯ ನಿವೃತ್ತ ಸೈನಿಕ ದಿನೇಶ್ ಆಚಾರ್ಯ ಆಲೂರು ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ, ಎನ್.ಸಿ.ಸಿ. ಅಧಿಕಾರಿ ತಿಮ್ಮಪ್ಪ ಡಿ.ಎಸ್., ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿ, ನಿರೂಪಿಸಿ, ಲೆಫ್ಟಿನೆಂಟ್ ಹರೀಶ್ ಬಿ., ಎ.ಎನ್.ಓ., ವಂದಿಸಿದರು.

Exit mobile version