Kundapra.com ಕುಂದಾಪ್ರ ಡಾಟ್ ಕಾಂ

ನಿವೃತ್ತ ಯೋಧರಿಂದ ಡಿಸಿಗೆ ಮನವಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಇಲ್ಲಿನ ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಯ ಸುಮಾರು 50ಕ್ಕೂ ಹೆಚ್ಚು ಮಾಜಿ ಸೈನಿಕರು ಬುಧವಾರ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ನಿವೃತ್ತ ಯೋಧರಿಗೆ ಜಮೀನು ಮಂಜೂರು ಮಾಡುವ ಕುರಿತು ಮನವಿಯನ್ನು ಸಲ್ಲಿಸಿದರು.

ಈ ವೇಳೆ ಸಂಘಟನೆಯಿಂದ ಮಾಜಿ ಸೈನಿಕರಿಗೆ ಜಮೀನು ನೀಡುವ ವಿಚಾರದಲ್ಲಿ ಸುಮಾರು 20 ನಿಮಿಷಗಳ ಕಾಲ ಎಲ್ಲಾ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಈ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಿ ಶೀಘ್ರದಲ್ಲೇ ಭೂ ಮಂಜೂರು ಪ್ರಕ್ರಿಯೆಗೊಳಸಲು ಶ್ರಮಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಕೇಶವ ಮಲ್ಪೆ, ಕಾರ್ಯದರ್ಶಿ ಸುರೇಶ್ ರಾವ್, ಉಪಾಧ್ಯಕ್ಷ ಚಂದ್ರ ಅಮೀನ್ ಮತ್ತಿತರರು ನಿವೃತ್ತ ಯೋಧರ ಸಂಘದ ಪದಾಧಿಕಾರಿಗಳು ಇದ್ದರು.

Exit mobile version