Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ರಸ್ತೆ ಸುರಕ್ಷತೆ ಮತ್ತು ಚಿಹ್ನೆಗಳ ಬಗ್ಗೆ ವಿಶೇಷ ಅತಿಥಿ ಉಪನ್ಯಾಸ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟು ಯೋಜನೆಯಡಿ ಆಟೋಮೊಬೈಲ್ ವಿಭಾಗದಲ್ಲಿ ಅಭ್ಯಸಿಸುತ್ತಿರುವ ಒಂಬತ್ತನೇ ತರಗತಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಚಿಹ್ನೆಗಳ ಬಗ್ಗೆ ವಿಶೇಷ ಅತಿಥಿ ಉಪನ್ಯಾಸ ಏರ್ಪಡಿಸಲಾಗಿತ್ತು.

ಈ ಸಂದರ್ಭ ಕುಂದಾಪುರ ಸಂಚಾರ ಠಾಣೆಯ ಉಪನಿರೀಕ್ಷಕರಾದ ಅನೂಪ್ ನಾಯಕ್ ಹಾಗೂ ಸುಧಾ ಪ್ರಭು ಮತ್ತು ಎಎಸ್‌ಐ ನರೇಶ್ ಕೋಟ್ಯಾನ್‌ ಸಂಚಾರಿ ನಿಯಮಗಳ ಬಗ್ಗೆ ಉಪಯುಕ್ತ ಮಾಹಿತಿ ಹಂಚಿಕೊಂಡರು.

ಸಂಸ್ಥೆಯ ಉಪ ಪ್ರಾಂಶುಪಾಲರಾದ ಕೆ. ಕಿರಣ್ ಹೆಗ್ಡೆ, ಆಟೋಮೊಬೈಲ್ ತರಬೇತುದಾರ ಅರುಣ್ ಶೆಟ್ಟಿ ಉಪಸ್ಥಿತರಿದ್ದರು.

Exit mobile version