ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ”, ಅಲೆಮಾರಿ/ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, “ಶುಲ್ಕ ಮರುಪಾವತಿ” ಮತ್ತು “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ವೆಬ್ಸೈಟ್ https://ssp.postmatric.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 15 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

