Site icon Kundapra.com ಕುಂದಾಪ್ರ ಡಾಟ್ ಕಾಂ

ಬಾಳ್ಕುದ್ರು: ಮೀನುಗಾರಿಕೆ ವೇಳೆ ಆಯತಪ್ಪಿ ನೀರಿಗೆ ಬಿದ್ದು ಮೀನುಗಾರ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಇಲ್ಲಿನ ಬಾಳ್ಕುದ್ರು ಗ್ರಾಮದ ಹಂಗಾರಕಟ್ಟೆಯಲ್ಲಿ ಮೀನುಗಾರಿಕೆ ವೇಳೆ ಆಯತಪ್ಪಿ ನೀರಿಗೆ ಬಿದ್ದು ಮೀನುಗಾರ ಸಾವನ್ನಪ್ಪಿದ ಘಟನೆ ಮಂಗಳವಾರದಂದು ಸಂಭವಿಸಿದೆ.

ಮಣೂರು ಗ್ರಾಮದ ನಿವಾಸಿ ನಟರಾಜ್ (36) ಮೃತ ಮೀನುಗಾರ.

ನಟರಾಜ್ ಬೋಟಿನಲ್ಲಿ ಮೀನುಗಾರಿಕೆಗೆ ನಿರ್ವಹಿಸುತ್ತಿದ್ದ ಸಂದರ್ಭ ಊಟ ಮಾಡಿ ಕೈ ತೊಳೆಯುವ ವೇಳೆ ಆಯತಪ್ಪಿ ನೀರಿಗೆ ಬಿದ್ದಿದ್ದು ಸಹಕಾರ್ಮಿಕರು ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಬಳಿಕ ಫೆ.4ರಂದು ಬೆಳಿಗ್ಗೆ ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version