ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿದೇಗುಲದ ವತಿಯಿಂದ ಇದೇ ಬರುವ ಮಾಚ್೯ 1ರಂದು ನಡೆಯಲಿರುವ ಏಕ: ಪವಿತ್ರ ನಾಗಮಂಡಲೋತ್ಸವ ಇದರ ಆಮಂತ್ರಣ ಪತ್ರಿಕೆಯನ್ನು ಬುಧವಾರ ದೇಗುಲದಲ್ಲಿ ಬಿಡುಗಡೆಗೊಳಿಸಲಾಯಿತು.
ಬಿಡುಗಡೆ ಸಮಾರಂಭದಲ್ಲಿ ನಾಗದೇವರರಿಗೆ ವಿಶೇಷ ಪೂಜೆ ಸಲ್ಲಿಸಿ, ಶ್ರೀ ದೇವಿ ಅಮೃತೇಶ್ವರೀಗೆ ಪರಿವಾರ ದೇವರುಗಳಾದ ಮಾರಿಯಮ್ಮ, ರಕ್ತೇಶ್ವರಿ, ವೀರಭದ್ರ, ಬೊಬ್ಬರ್ಯ ಪರಿವಾರ ದೇವರುಗಳಿಗೆ ಪೂಜೆ ಸಲ್ಲಿಸಿ ಆಮಂತ್ರಣ ಪತ್ರಿಕೆಯನ್ನು ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್ ಬಿಡುಗಡೆಗೊಳಿಸಿದರು.

ದೇಗುಲದಲ್ಲಿ ಈ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ತಯಾರಿ ಕುರಿತಂತೆ ಚರ್ಚಿಸಲಾಯಿತು. ಉಪಸ್ಥಿತರಿದ್ದ ಗ್ರಾಮಸ್ಥರಿಂದ ಸಲಹೆ ಸೂಚನೆಗಳನ್ನು ಪಡೆಯಲಾಯಿತು.
ದೇಗುಲದ ಟ್ರಸ್ಟಿಗಳಾದ ರತನ್ ಐತಾಳ್, ಶಿವ ಪೂಜಾರಿ, ಸುಧಾ ಎ. ಪೂಜಾರಿ, ಗಣೇಶ್ ನೆಲ್ಲಿಬೆಟ್ಟು, ಸುಭಾಷ್ ಶೆಟ್ಟಿ ಗಿಳಿಯಾರು, ಜ್ಯೋತಿ ಡಿ. ಕಾಂಚನ್, ಸುಬ್ರಾಯ ಜೋಗಿ,ಹರ್ತಟ್ಟು ಶಿರಸಿ ದೇವಿ ದೇಗುಲದ ಮಂಜುನಾಥ್ ಪೂಜಾರಿ, ಕೋಟ ಮಹತೋಭಾರ ಶ್ರೀ ಹಿರೇಮಹಾಲಿಂಗೇಶ್ವರ ದೇಗುಲದ ಟ್ರಸ್ಟಿ ಭಾಸ್ಕರ ಶೆಟ್ಟಿ, ಹೊನ್ನಾರಿ ಬೊಬ್ಬರ್ಯ ದೈವಸ್ಥಾನದ ಪ್ರಧಾನ ಅರ್ಚಕ ಮಹಾಬಲ ಹೇರ್ಳೆ, ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್, ಕೋಟ ಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ, ದೇಗುಲದ ಮಾಜಿ ಟ್ರಸ್ಟಿ ಚಂದ್ರ ಪೂಜಾರಿ, ಸುಬ್ರಾಯ ಆಚಾರ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದೇಗುಲದ ಟ್ರಸ್ಟಿ ಚಂದ್ರ ಆಚಾರ್ ನಿರ್ವಹಿಸಿದರು.