Kundapra.com ಕುಂದಾಪ್ರ ಡಾಟ್ ಕಾಂ

ಗುಜ್ಜಾಡಿ: ವಿವಿಧ ಕಾಮಗಾರಿಗಳಿಗೆ ಶಾಸಕ ಗುರುರಾಜ್‌ ಗಂಟಿಹೊಳೆ ಗುದ್ದಲಿ ಪೂಜೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಅನೇಕ ಯೋಜನೆಗಳನ್ನು ರೂಪಿಸಲಾಗಿದೆ. ದಾನಿಗಳು ಸರಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಿ ಶಾಲೆಯ ಸರ್ವತೋಮುಖ ಅಭಿವೃದ್ಧಿ ಮಾಡುವ ಪ್ರಯತ್ನ ನಡೆಯುತ್ತಿದೆ. ಸರಕಾರದಿಂದ ಅನುದಾನ ಬಿಡುಗಡೆಯಾದ ಬಳಿಕ ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು.

ಅವರು ಗುರುವಾರ ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 2ಲಕ್ಷ ವೆಚ್ಚದಲ್ಲಿ ಕೊಡಂಚ ರಸ್ತೆ ಮತ್ತು ಸುಮಾರು 3ಲಕ್ಷ ರೂ. ವೆಚ್ಚದಲ್ಲಿ ಪರಮತೋಟ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಪುರೋಹಿತರಾದ ಜಿ. ವಿಠಲದಾಸ ಭಟ್ ಗಂಗೊಳ್ಳಿ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ., ಗುಜ್ಜಾಡಿಯ ಉದ್ಯಮಿ ಉಮೇಶ ಎಲ್. ಮೇಸ್ತ, ಗುಜ್ಜಾಡಿ ಗ್ರಾಪಂ. ಸದಸ್ಯರಾದ ಹರೀಶ ಮೇಸ್ತ, ತುಂಗಾ ಪೂಜಾ‍ರ್ತಿ, ಶ್ರೀಧರ, ಗುಜ್ಜಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜು ಪೂಜಾರಿ, ಮೋಹನ ನಾಯ್ಕ್, ಜಿ. ರೋಹಿದಾಸ ನಾಯಕ್, ಅಶೋಕ ನಾಯ್ಕ್, ರಾಮನಾಥ ಚಿತ್ತಾಲ್, ಅಕ್ಷಯ ಮಂಕಿ, ಸುಕ್ರ ಪೂಜಾರಿ, ಸುಧಾಕರ ಪೂಜಾರಿ, ಶ್ರೀಧರ ಪೂಜಾರಿ, ನರಸಿಂಹ ನಾಯ್ಕ್, ಬೈಂದೂರು ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಂತ್, ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

Exit mobile version