Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಕಟ್‌ಬೇಲ್ಲೂರು ಸಮೀಪ ಬಾರ್ ಎಂಡ್ ರೆಸ್ಟೋರೆಂಟ್‌ನಲ್ಲಿ ಕ್ಲೀನಿಂಗ್ ಕೆಲಸ ಮಾಡಿಕೊಂಡಿದ್ದ ಸುರೇಶ (60) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಡಿತದ ಚಟ ಹೊಂದಿದ್ದರಿಂದ ಕೆಲಸಕ್ಕೆ ಬರುವುದು ಬೇಡ ಎಂದು ಹೇಳಲಾಗಿತ್ತು. ಅದಾಗಿ 3 ದಿನಗಳ ಬಳಿಕ ಕೆಲಸ ಮಾಡುವವರಿಗೆ ಇರಲು ಕೊಟ್ಟಿದ್ದ ರೂಮಿನ ಬಳಿ ನೇಣು ಬಿಗಿದುಕೊಂಡು ಮೃತ ಪಟ್ಟಿದ್ದಾರೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version