ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಸವಾರ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಾವುಂದ ರಾ.ಹೆ 66 ರಲ್ಲಿ ರಾತ್ರಿ ಸಂಭವಿಸಿದೆ. ಜಯಂತ ಗಂಭೀರ ಗಾಯಗೊಂಡ ವ್ಯಕ್ತಿ.
ಕುಂದಾಪುರದಿಂದ ಬೈಂದೂರಿಗೆ ಹೋಗುತ್ತಿದ್ದ ಬೈಕ್ ಸವಾರ ಮಿಥುನ್ ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರುಗಡೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜಯಂತ ಅವರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದರು. ತಕ್ಷಣ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

