Site icon Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಾವಲಂಬಿ ಬದುಕು: ಸತೀಶ್ ಕುಂದರ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬ್ರಹ್ಮಾವರ, ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಕಾರ್ಯಕ್ಷೇತ್ರದಲ್ಲಿ 25 ಮಂದಿ ಅಭ್ಯರ್ಥಿಗಳಿಗೆ ಸೀರೆ ಗುಚ್ಚು ಹಾಕುವ ಮೂರು ದಿನದ ತರಬೇತಿ ಕಾರ್ಯಕ್ರಮದ  ಸಮಾರೋಪ ಸಮಾರಂಭವು ಕೋಟತಟ್ಟು ಪಂಚಾಯತ್ ಸಭಾಂಗಣದಲ್ಲಿ ಇತ್ತೀಚಿಗೆ ಜರಗಿತು.

ಕಾರ್ಯಕ್ರಮವನ್ನು ಬ್ರಹ್ಮಾವರ ತಾಲೂಕಿನ ಯೋಜನಾಧಿಕಾರಿ ರಮೇಶ್ ಪಿ.ಕೆ.  ಉದ್ಘಾಟಿಸಿ, ಕೌಶಲ್ಯಾಭಿವೃದ್ಧಿ ತರಬೇತಿ ಅಡಿಯಲ್ಲಿ ಸೀರೆಗುಚ್ಚು ಹಾಕುವ ತರಬೇತಿಯು ನಿಮಗೆ ಒಂದು ಉತ್ತಮ ಅವಕಾಶ ಕಲ್ಪಿಸಿಕೊಟ್ಟಿದೆ, ಸ್ವಉದ್ಯೋಗ ಮಾಡುವುದರಿಂದ ಸ್ವಾವಲಂಬನೆ ಜೀವನ ನಡೆಸಲು ಸುಲಭ ಸಾಧ್ಯ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ ಕೋಟತಟ್ಟು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸತೀಶ್ ಕುಂದರ್ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ ಮಹಿಳೆಯರಿಗೆ ಇಂದು ಸ್ವಾವಲಂಬನೆಯಾಗಿ ಬದುಕಲು ಉತ್ತಮ ಅವಕಾಶ ಕೊಟ್ಟಿದೆ ಎಂದರು.

ರಾಷ್ಟ್ರೀಯ ಸ್ವಸಹಾಯ ಸಂಘ ತರಬೇತಿ ಸಂಸ್ಥೆ ಉಡುಪಿ ಇದರ ತರಬೇತಿ ಶಿಕ್ಷಕಿ ರೀನಾ ಎಲ್ಲ ಸದಸ್ಯರು ಆಸಕ್ತಿಯಿಂದ ಮೂರು ದಿನದಲ್ಲಿ 14 ರೀತಿಯ ಸೀರೆ ಗುಚ್ಚು ಹಾಕುವ ತರಬೇತಿ ಪಡೆದುಕೊಂಡಿದ್ದೀರಿ. ಇದನ್ನು ಮುಂದುವರಿಸಿ ಒಳ್ಳೆಯ ಸ್ವ ಉದ್ಯೋಗ ಮಾಡುವಂತ್ತಾಗಲಿ ಎಂದು ಶುಭ ಹಾರೈಸಿದರು.

ಜ್ಞಾನವಿಕಾಸ ಸಮನ್ವಯಾಧಿಕಾರಿ ಪುಷ್ಪಲತಾ, ಸೇವಾ ಪ್ರತಿನಿಧಿ ಶೋಭಾ ಹಾಗೂ ತರಬೇತಿ ಅಭ್ಯರ್ಥಿಗಳು 25 ಮಂದಿ ಉಪಸ್ಥಿತರಿದ್ದರು.

Exit mobile version