ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ವಿದ್ಯಾ ಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳು ಕೊಪ್ಪಳ ಜಿಲ್ಲೆಯಲ್ಲಿ ನಡೆದ 2025-26ನೇ ಸಾಲಿನ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಹೈಸ್ಕೂಲ್ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಮದರ್ ತೆರೇಸಾ ಶಾಲೆಯ 10ನೇ ತರಗತಿಯ ಉದಯೋನ್ಮುಖ ಪ್ರತಿಭೆಗಳಾದ ಪ್ರೀತಮ್ ಜಿ. ಪೂಜಾರಿ ಹಾಗೂ ರಿಷಿ ಶೆಟ್ಟಿ ಈ ವಿಶೇಷ ಸಾಧನೆ ಮಾಡಿ ರಾಜ್ಯಮಟ್ಟದಲ್ಲಿ ಸಂಸ್ಥೆಗೆ ಹೆಸರು ತಂದಿರುತ್ತಾರೆ.
ಈ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರಾದ ಶಮಿತಾ ರಾವ್ ಹಾಗೂ ರೆನಿಟಾ ಲೋಬೋ, ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯಿನಿ, ಬೋಧಕ ಬೋಧಕೇತರ ಸಿಬ್ಬಂದಿಯವರು ಹರ್ಷ ವ್ಯಕ್ತಪಡಿಸಿ ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿರುತ್ತಾರೆ.

