ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಪ್ರಯಾಣಿಕರ ಹಿತದೃಷ್ಟಿಯಿಂದ ಬೆಂಗಳೂರಿನ ಮೆಟ್ರೋ ಪ್ರಯಾಣ ಬೆಲೆ ಏರಿಕೆಯ ವಿರುದ್ಧ ಧ್ವನಿ ಎತ್ತಿದ ನಮ್ಮ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದು ಖಂಡನೀಯ. ಕಾಂಗ್ರೆಸ್ ಆಡಳಿತದಲ್ಲಿ ಜನರ ಪರ ಧ್ವನಿ ಎತ್ತಿದರೆ ಜೈಲು ಗ್ಯಾರಂಟಿ. ಎಂದು ಬೈಂದೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಗಜೇಂದ್ರ ಎಸ್. ಬೇಲೆಮನೆ ಆಕ್ರೋಶ ವ್ಯಕ್ತಪಡಿಸಿದ್ದಾರೆ..
ಗ್ಯಾರಂಟಿ ಯೋಜನೆಗಳಿಂದ ದಿವಾಳಿ ಆಗಿರುವ ಸಿದ್ದರಾಮಯ್ಯ ಸರ್ಕಾರ ಅಬಕಾರಿ ಇಲಾಖೆಯ ನಂತರ ಮೆಟ್ರೋವನ್ನು ಟಾರ್ಗೆಟ್ ಮಾಡಿಕೊಂಡಿದೆ. ಅವೈಜ್ಞಾನಿಕವಾಗಿ ಮೆಟ್ರೋ ದರ ಏರಿಸಿ ಜನಸಾಮಾನ್ಯರಿಗೆ ಬರೆ ಹಾಕುತ್ತಿದೆ. ಬಂಧನ ಮಾಡುವ ಮೂಲಕ ನೀವು ನಮ್ಮ ದನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ನಾವು ಜನಪರ ಹೋರಾಟದಿಂದ ಹಿಂದೆ ಸರಿಯುವ ಮಾತೇ ಇಲ್ಲ. ಜನಪರ ಹೋರಾಟ ಕೈಗೊಂಡಿರುವ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರಿಗೆ ನಮ್ಮ ಬೆಂಬಲವಿದೆ ಎಂದು ಬೈಂದೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರು ಗಜೇಂದ್ರ ಎಸ್. ಬೇಲೆಮನೆ ತಿಳಿಸಿದರು.

