Site icon Kundapra.com ಕುಂದಾಪ್ರ ಡಾಟ್ ಕಾಂ

ಕೋಟ: ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಯುವಕನ ಬಂಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಪಾಂಡೇಶ್ವರದ ಕೋಸ್ಟಲ್ ಪ್ಯಾರಡೈಸ್ ಹೋಟೆಲ್ ಬಳಿ, ಸಾರ್ವಜನಿಕ ಸ್ಥಳದಲ್ಲಿ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕೋಟ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ.

ಪೊಲೀಸ್ ಉಪನಿರೀಕ್ಷಕ ಪ್ರವೀಣ್ ಕುಮಾರ್ ಆರ್. ಅವರ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಆರೋಪಿಯಾದ ಹಂಗಾರಕಟ್ಟೆ ಬಾಳ್ಕುದ್ರು ಗ್ರಾಮದ ಮನಿತ್‌ (26) ಎಂಬ ಯುವಕನನ್ನು ಬಂಧಿಸಿದ್ದಾರೆ.

ಆರೋಪಿಯ ವಶದಿಂದ ಕ್ರಿಕೆಟ್ ಬೆಟ್ಟಿಂಗ್‌ಗೆ ಬಳಸಲಾಗುತ್ತಿದ್ದ ಐಫೋನ್ ಮೊಬೈಲ್ ಹಾಗೂ ನಗದು ರೂ.800ನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ತನಿಖೆಯಲ್ಲಿ, ಆರೋಪಿಯು ಇತರರೊಂದಿಗೆ ಓಮನ್ ಹಾಗೂ ಜಿಂಬಾಂಬ್ವೆ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿ, PARKKER777 ಎಂಬ ಆನ್‌ಲೈನ್ ಅಪ್ಲಿಕೇಶನ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದನು ಎಂಬುದು ಬೆಳಕಿಗೆ ಬಂದಿದೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Exit mobile version