Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಗ್ರಾಮ ಪಂಚಾಯತ್‌ನ ವಾರ್ಷಿಕ ಲೆಕ್ಕಪತ್ರಗಳ ಜಮಾಬಂದಿ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಗಂಗೊಳ್ಳಿ ಗ್ರಾಮ ಪಂಚಾಯತ್‌ನ 2024-25ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ಜಮಾಬಂದಿ ಕಾರ್ಯಕ್ರಮ ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮಂಗಳವಾರ ನಡೆಯಿತು.

ಕುಂದಾಪುರ ತಾಪಂ. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಚಂದ್ರ ನಾಯ್ಕ್ ಜಮಾಬಂದಿ ಅಧಿಕಾರಿಯಾಗಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷ ತಬ್ರೇಜ್, ಕಾರ್ಯದರ್ಶಿ ಅನೂಪ್ ಶೇಟ್, ಜಮಾಬಂಧಿ ಸಹಾಯಕಿ ಪ್ರೇಮಾ, ಗ್ರಾಪಂ. ಸದಸ್ಯರು, ಗ್ರಾಪಂ. ಮಾಜಿ ಸದಸ್ಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಗ್ರಾಪಂ. ಸಿಬ್ಬಂದಿಗಳು, ಗ್ರಾಮಸ್ಥರು ಭಾಗವಹಿಸಿದ್ದರು. ಇದೇ ಸಂದರ್ಭ 2024-25ನೇ ಸಾಲಿನಲ್ಲಿ ನಡೆದ ಕೆಲವು ಕಾಮಗಾರಿಗಳನ್ನು ಪರಿಶೀಲನೆ ನಡೆಸಲಾಯಿತು.

ಗ್ರಾಪಂ. ಪಿಡಿಒ ರವಿ ಸ್ವಾಗತಿಸಿದರು. ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Exit mobile version