ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಫೆ.12: ನಿವೃತ್ತ ಉಪನ್ಯಾಸಕ, ಸಾಹಿತಿ, ರಂಗಕರ್ಮಿ ಕೋಣಿ ಶಿವಾನಂದ ಕಾರಂತ (80) ಅವರು ಫೆ.11ರಂದು ದೈವಾಧೀನರಾದರು.
ಗುಜ್ಜಾಡಿ ನಿವಾಸಿಯಾಗಿದ್ದ ಅವರು ಗಂಗೊಳ್ಳಿಯ ಎಸ್.ವಿ ಪದವಿಪೂರ್ವ ಕಾಲೇಜಿನಲ್ಲಿ ಇತಿಹಾಸ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಅವರು ವಿವಿಧ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಸಾಹಿತಿಯಾಗಿದ್ದ ಕೋ.ಶಿ ಕಾರಂತರು 5 ಸಾವಿರಕ್ಕೂ ಹೆಚ್ಚು ಅಂಕಣ ಬರಹಗಳನ್ನು ಕುಂದಪ್ರಭ ವಾರಪತ್ರಿಕೆಯಲ್ಲಿ ಮೂರುವರೆ ದಶಕಗಳ ಕಾಲ ಬರೆದಿದ್ದರು. ಸಂಗೀತ, ರಂಗಭೂಮಿ, ಸಾಹಿತ್ಯ ಕ್ಷೇತ್ರಗಳಲ್ಲಿ ಅಪಾರ ಜ್ಞಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಆಕಾಶವಾಣಿ ಕಾರ್ಯಕ್ರಮ, ರಂಗಭೂಮಿಯಲ್ಲಿ ಆಸಕ್ತಿ ಹೊಂದಿ ನಟನೆ ಮತ್ತು ನಾಟಕ ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದರು. 10ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದು, ಕುಂದಾಪುರ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಅವರಿಗೆ ಕೋಟ ಶಿವರಾಮ ಕಾರಂತ ಸದ್ಭಾವನಾ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಮೃತರು ಪತ್ನಿ ಪುತ್ರಿಯನ್ನು ಅಗಲಿದ್ದಾರೆ

