ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪ್ರತಿಷ್ಠಾನದ 26ನೇ ವಾರ್ಷಿಕ ಉತ್ಸವದ ನಾಲ್ಕು ದಿನಗಳ ಸುರಭಿ “ಜೈಸಿರಿ” ಮತ್ತು “ಬಿಂದುಶ್ರೀ” ಪ್ರಶಸ್ತಿ ಪ್ರದಾನ ಸಮಾರಂಭದ ನಾಲ್ಕು ದಿನಗಳ ಸಾಂಸ್ಕೃತಿಕ ಉತ್ಸವದ ಆಮಂತ್ರಣ ಪತ್ರಿಕೆಯನ್ನು ನ್ಯಾಯವಾದಿ ಮಂಗೇಶ ಶಾನುಭಾಗ್ ಏಳಜಿತ್ ಬಿಡುಗಡೆಗೊಳಿಸಿದರು.

ನಂತರ ಮಾತನಾಡಿ, ನಿರಂತರ ವೈವಿಧ್ಯಮಯ ಸಾಂಸ್ಕೃತಿಕ ಉತ್ಸವಗಳ ಮೂಲಕ ಬೈಂದೂರನ್ನು ಸಾಂಸ್ಕೃತಿಕ ನಗರಿಯನ್ನಾಗಿಸುತ್ತಿರುವ ಸುರಭಿ ಸಂಸ್ಥೆಗೆ ಶುಭ ಹಾರೈಸಿದರು.
ಅಧ್ಯಕ್ಷತೆಯನ್ನು ಸುರಭಿ ಸಂಸ್ಥೆಯ ಅಧ್ಯಕ್ಷರಾದ ಆನಂದ ಮದ್ದೋಡಿ ವಹಿಸಿದ್ದು ಕಾರ್ಯಕ್ರಮದ ರೂಪುರೇಷೆ ತಿಳಿಸಿದರು. ಸಂಸ್ಥೆಯ ನಿರ್ದೇಶಕ ಸುಧಾಕರ್ ಪಿ. ಬೈಂದೂರು ಪ್ರಾಸ್ತಾವಿಕ ಮಾತನಾಡಿದರು. ಉಪಾಧ್ಯಕ್ಷ ಲಕ್ಷ್ಮಣ ಕೊರಗ ವಂದಿಸಿ, ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಸ್ವಾಗತಿಸಿ, ನಿರೂಪಿಸಿದರು.