ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೆನರಾ ಬ್ಯಾಂಕಿನ ನಿವೃತ್ತ ಮ್ಯಾನೇಜರ್, ಗಂಗೊಳ್ಳಿ ನಿವಾಸಿ ಎಂ. ಭಾಸ್ಕರ ಪೈ (91) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಗುರುವಾರ ನಿಧನರಾದರು.
ಕೆನರಾ ಬ್ಯಾಂಕಿನ ವಿವಿಧ ಹುದ್ದೆಗಳಲ್ಲಿ ಒಟ್ಟು ಸುಮಾರು 40 ವರ್ಷ ಕಾಲ ಸೇವೆ ಸಲ್ಲಿಸಿ ಮತ್ತು ಸುಮಾರು 20 ವರ್ಷ ಕೆನರಾ ಬ್ಯಾಂಕಿನ ಶಾಖಾ ಪ್ರಬಂಧಕರಾಗಿ ದೇಶದ ವಿವಿಧೆಡೆ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮುಳ್ಳಿಕಟ್ಟೆಯಲ್ಲಿ ಹಲವು ವರ್ಷಗಳಿಂದ ವಾಸವಾಗಿದ್ದ ಅವರು ಕೃಷಿಕರಾಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.
ಕಳೆದ ಸುಮಾರು ಒಂದು ವರ್ಷಗಳಿಂದ ಗಂಗೊಳ್ಳಿಯಲ್ಲಿ ವಾಸವಾಗಿದ್ದರು. ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು ಜನಾನುರಾಗಿದ್ದರು.
ಮೃತರು ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

