Site icon Kundapra.com ಕುಂದಾಪ್ರ ಡಾಟ್ ಕಾಂ

ಕೋಟ: ಎದೆನೋವಿನಿಂದ ವ್ಯಕ್ತಿ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಇಲ್ಲಿನ ಬ್ರಹ್ಮಾವರ ತಾಲೂಕಿನ ನಂಚಾರು ಗ್ರಾಮದ ಪ್ರಕಾಶ್ ಎಸ್. ಶೆಟ್ಟಿ (55) ಎದೆನೋವಿಗೊಳಗಾಗಿ ಮೃತಪಟ್ಟಿದ್ದಾರೆ.

ಅವರು 10 ದಿನಗಳ ಹಿಂದೆ ಹೃದಯ ಸಂಬಂಧಿ ತೊಂದರೆ ಕಾಣಿಸಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲುಗೊಂಡು ಚಿಕಿತ್ಸೆ ಪಡೆದುಕೊಂಡಿದ್ದರು. ಫೆ.12ರಂದು ಶಸ್ತ್ರಚಿಕಿತ್ಸೆ ನಿಗದಿಯಾಗಿತ್ತು. ಬುಧವಾರ ಮಧ್ಯಾಹ್ನದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version