Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್‌ನಲ್ಲಿ ಜಲ ಅರ್ಪಣ ದಿವಸ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯ ಕೋಟತಟ್ಟು ಗ್ರಾಮ ಪಂಚಾಯತ್‌ನಲ್ಲಿ ಜಲ್ ಅರ್ಪಣ್ ದಿವಸ ಆಚರಣೆ, ಜೆಜೆಎಮ್‌ ಯೋಜನೆಯಡಿ ಸೃಜಿಸಿದ ಸ್ವತ್ತುಗಳ ನಿರ್ವಹಣೆಯ ಬಗ್ಗೆ, ಕುಡಿಯುವ ನೀರಿನ ಯೋಜನೆಯ ಕಾರ್ಯಾಚರಣೆ ಹಾಗೂ ನಿರ್ವಹಣೆ ಬಗ್ಗೆ ಗ್ರಾಮಸ್ಥರಿಗೆ, ವಿಡಬ್ಲೂಎಸ್‌ಸಿ ಸದಸ್ಯರಿಗೆ ಶನಿವಾರ ಮಾಹಿತಿ ನೀಡಲಾಯಿತು.

ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಯ ಪ್ರಾತ್ಯಕ್ಷಿಕೆ ನಡೆಸಿ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಚಿಕ್ಕ ಮಗಳೂರು ಕ್ಷೇತ್ರದ ಮಾನ್ಯ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು 8 ಕೊರಗ ಸಮುದಾಯದ ಫಲಾನುಭವಿಗಳಿಗೆ ಮನೆ ಹಾಗೂ ಕುಡಿಯುವ ನೀರಿನ ಸೇವೆಯನ್ನು ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಬ್ರಹ್ಮಾವರ ತಾ. ಪಂ ಇಒ, ಇಇ ಮತ್ತು ಎಇಇ, ಆರ್‌ಡಬ್ಲೂಎಸ್‌, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಇಲಾಖೆಯ ಸೆಕ್ಷನ್ ಆಫೀಸರ್ ಗಳು, ಫಲಾನುಭವಿಗಳು, ಪಂಚಾಯತ್ ಪಂಪ್ ಆಪರೇಟರ್, ಗ್ರಾಮಸ್ಥರು ಪಾಲ್ಗೊಂಡಿದ್ದರು.

Exit mobile version