Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಗುಲ್ವಾಡಿ ಸೌಕೂರು ಆಳ್ವರ ಮನೆಯ ಶಶಾಂಕ್‌ ಶೆಟ್ಟಿ (32) ಎಂದು ಗುರುತಿಸಲಾಗಿದೆ.

ಈತನ ವಿರುದ್ಧ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ 7 ಪ್ರಕರಣ, ಹೆಬ್ರಿ- 1, ಕಲಘಟಕಿ- 1, ಕೋಟ- 1 ಹಾಗೂ ಬೆಂಗಳೂರು ಚಂದ್ರ ಲೇ ಔಟ್‌-1 ರಂತೆ ಕಳ್ಳತನ, ಸುಲಿಗೆ, ಹನಿಟ್ರಾಪ್‌ ಗಳಂತಹ ಒಟ್ಟು 11 ಪ್ರಕರಣಗಳು ದಾಖಲಾಗಿವೆ.

ಈತನ ವಿರುದ್ದ ನ್ಯಾಯಾಲಯವು ಈವರೆಗೆ 12 ಬಾರಿ ವಾರೆಂಟ್‌ ಹೊರಡಿಸಿದ್ದು ಈತ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 4 ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಈತನ ಪತ್ತೆಯ ಬಗ್ಗೆ 4 ವರ್ಷಗಳಿಂದ ಪ್ರಯತ್ನಿಸುತ್ತಿದ್ದು ಖಚಿತ ಮಾಹಿತಿಯಂತೆ ಶಶಾಂಕ್‌ ಶೆಟ್ಟಿಯನ್ನು ರವಿವಾರದಂದು ಕುಂದಾಪುರ ತಾಲೂಕು ಬಿದ್ಕಲ್‌ ಕಟ್ಟೆ ಎಂಬಲ್ಲಿ ಬಂಧಿಸಲಾಗಿದೆ.

ಕುಂದಾಪುರ ಡಿವೈಎಸ್ಪಿ ಹೆಚ್.ಡಿ ಕುಲಕರ್ಣಿ ಮತ್ತು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ ಎ ಕಾಯ್ಕಿಣಿ ಮಾರ್ಗದರ್ಶನದಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್‌ ಉಪನಿರೀಕ್ಷಕರಾದ ನಾಸೀರ್‌ ಹುಸೇನ್‌, ಚಂದ್ರಕಲಾ ಮ ಪತ್ತಾರ ಅವರ ನೇತ್ರತ್ವದಲ್ಲಿ ಠಾಣಾ ಸಿಬ್ಬಂದಿ ರಾಜು ಬಿ., ಗುರು ಪ್ರಸಾದ್‌, ಕಿರಣ್‌ ಬಿ. ಪಾಟೀಲ್ ಹಾಗೂ ಕುಂದಾಪುರ ಠಾಣಾ ಸಿಬಂದಿ ಚಂದ್ರ ಶೆಟ್ಟಿ ಈ ಕಾರ್ಯಾಚರಣೆ ನಡೆಸಿದ್ದಾರೆ.

Exit mobile version