Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಶ್ರೀ ಇಂದುಧರ ದೇವಸ್ಥಾನ: 81ನೇ ಶಿವರಾತ್ರಿ ಮಹೋತ್ಸವ ಹಾಗೂ ಕುಣಿತ ಭಜನಾ ಸ್ಪರ್ಧೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಇದರ ವತಿಯಿಂದ 81ನೇ ಮಹಾ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಗಂಗೊಳ್ಳಿಯ ಸ.ವಿ. ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಆಯೋಜಿಸಲಾಗಿದ್ದ ಕಾರವಾರದಿಂದ ಮಂಗಳೂರುವರೆಗಿನ ಅಂತರ್ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ಕುಣಿತ ಭಜನಾ ಸ್ಪರ್ಧೆಯಲ್ಲಿ ಮೊವಾಡಿ ಶ್ರೀ ಮಾಣಿ ಸಿದ್ಧಲಿಂಗೇಶ್ವರ ಭಜನಾ ಮಂಡಳಿ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಆಶಿಕಾನ್ ಭಜನಾ ಮಂಡಳಿ ಭಟ್ಕಳ (ದ್ವಿತೀಯ) ಮತ್ತು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಾನಮದ್ಲು ಭಟ್ಕಳ (ತೃತೀಯ) ಸ್ಥಾನ ಪಡೆದುಕೊಂಡಿತು. ವಿಜೇತರಿಗೆ ತೀರ್ಪುಗಾರರಾದ ಉಡುಪಿ ಜಿಲ್ಲಾ ಭಜನಾ ಮಂಡಳಿಗಳ ಒಕ್ಕೂಟದ ಸಂಚಾಲಕ ಜಯಕರ ಪೂಜಾರಿ ಗುಲ್ವಾಡಿ, ಭಜನಾ ಪರಿಷತ್ ಗಂಗೊಳ್ಳಿ ವಲಯ ಅಧ್ಯಕ್ಷ ಜಗದೀಶ ಪೂಜಾರಿ, ಬಿ. ಪ್ರಕಾಶ ಶೆಣೈ ಮತ್ತು ಮಾಧವ ದೇವಾಡಿಗ ಬಹುಮಾನ ವಿತರಿಸಿ ಶುಭ ಹಾರೈಸಿದರು.

ದೇವಸ್ಥಾನದ ಅಧ್ಯಕ್ಷ ಗುರುರಾಜ್, ಕಾರ್ಯದರ್ಶಿ ವರದರಾಜ್ ಜಿ.ಟಿ. ಮತ್ತು ಅರ್ಚಕ ಕೃಷ್ಣ ಜಿ.ಟಿ., ದೇವಸ್ಥಾನದ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.

Exit mobile version