Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಉಚಿತ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ – ಓರ್ವನ ಬಂಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ರಿಂಗ್ ರಸ್ತೆ ಸಮೀಪ ವ್ಯಕ್ತಿಯೊಬ್ಬರು ಆಟೋ ರಿಕ್ಷಾದಲ್ಲಿ ಉಚಿತ ಅನ್ನಭಾಗ್ಯ ಅಕ್ಕಿಯನ್ನು ಸಾಗಾಟ ನಡೆಸುತ್ತಿರುವಾಗ ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ.

ಆಟೋ ಚಾಲಕ ಬಾಲಕೃಷ್ಣ ಖಾರ್ವಿಯನ್ನು ಪೊಲೀಸರು ಅಕ್ಕಿ ಸಹಿತ ವಶಪಡಿಸಿಕೊಂಡಿದ್ದಾರೆ.

ಆಹಾರ ನಿರೀಕ್ಷಕ ಸುರೇಶ ಎಚ್.ಎಸ್, ಪಿಎಸ್‌ಐ ನಂಜಾನಾಯ್ಕ್‌ ಎನ್‌. ಹಾಗೂ ಸಿಬ್ಬಂದಿಯವರೊಂದಿಗೆ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ಕಾಯುತ್ತಿರುವಾಗ ಆಟೋ ರಿಕ್ಷಾವು ಖಾರ್ವಿಕೇರಿ ರಿಂಗ್ ರಸ್ತೆ ಕಡೆಯಿಂದ ಬರುತ್ತಿರುವುದನ್ನು ಕಂಡು ನಿಲ್ಲಿಸಿ, ಪರಿಶೀಲಿಸಿದಾಗ ಆಟೋ ರಿಕ್ಷಾದಲ್ಲಿ ಅಕ್ಕಿ ತುಂಬಿದ 8 ಪಾಲೀಥಿನ್ ಚೀಲದಲ್ಲಿ ಉಚಿತ ಅನ್ನಭಾಗ್ಯ ಅಕ್ಕಿ ಇತ್ತು. ಚಾಲಕ ಕೃಷ್ಣ ಖಾರ್ವಿ ಬಳಿ ಇದ್ದ ಒಟ್ಟು 300 ಕೆ.ಜಿ ತೂಕದ ಅಂದಾಜು ರೂ.7,200 ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version