ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪವರ್‌ಲಿಫ್ಟಿಂಗ್ ಇಂಡಿಯ, ಕೂಳೂರು ಸ್ಪೋರ್ಟ್ಸ್ ಪ್ರಮೋಟರ್ಸ್ ಅವರ ಸಂಯೋಜನೆಯಲ್ಲಿ, ಕರ್ನಾಟಕ ಪವರ್‌ಲಿಫ್ಟಿಂಗ್ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಪವರ್‌ಲಿಫ್ಟಿಂಗ್ ಸಂಸ್ಥೆ ಅವರ ಸಹಭಾಗಿತ್ವದಲ್ಲಿ ಕರ್ನಾಟಕ ರಾಜ್ಯ ಮಾಸ್ಟರ್ಸ್ ಮತ್ತು ದಕ್ಷಿಣ ಕನ್ನಡ – ಉಡುಪಿ ಜಿಲ್ಲಾ ಮಟ್ಟದ ಪವರ್‌ಲಿಫ್ಟಿಂಗ್ ಸ್ಪರ್ಧಾಕೂಟ -2026 ನಡೆಯಿತು.
ಕುಂದಾಪುರ ನ್ಯೂ ಹರ್ಕ್ಯುಲೆಸ್ ಜಿಮ್ ಸಂಸ್ಥೆಯ ಮುಖ್ಯಸ್ಥರು, ಅಂತರಾಷ್ಟ್ರೀಯ ಪವರ್ ಲಿಫ್ಟರ್ ಸತೀಶ್ ಖಾರ್ವಿ ಅವರು 66 ಕೆಜಿ ಎಂ-2 ವಿಭಾಗದಲ್ಲಿ Classic ಹಾಗೂ Equipped-ಎರಡು ವಿಭಾಗಗಳಲ್ಲಿ ಸ್ಪರ್ಧಿಸಿ ಎರಡು ಚಿನ್ನದ ಪದಕಗಳು ಹಾಗೂ ಕರ್ನಾಟಕದ ಬಲಿಷ್ಠ ಪುರುಷ-2026 ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಕುಂದಾಪುರ ನ್ಯೂ ಹರ್ಕ್ಯುಲೆಸ್ ಜಿಮ್ ಸಂಸ್ಥೆಯ ಸದಸ್ಯರಾದ ಕಾರ್ತಿಕ್ ಪೂಜಾರಿ ಅವರು 93 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ದಕ್ಷಿಣ ಕನ್ನಡ-ಉಡುಪಿ ಜಿಲ್ಲಾ ಮಟ್ಟದ ಬಲಿಷ್ಠ ಪುರುಷ-2026 ಪ್ರಶಸ್ತಿ ಪಡೆದುಕೊಂಡಿದ್ದಾರೆ.

