ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ವಲಯ ಬಿಲ್ಲವ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷ, ನಿವೃತ್ತ ಮುಖ್ಯಶಿಕ್ಷಕ ಶ್ರೀನಿವಾಸ ಉಬ್ಬೇರಿ (76) ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಉಪ್ಪುಂ ದಲ್ಲಿರುವ ಸ್ವಗೃಹದಲ್ಲಿ ಮಂಗಳವಾರ ನಿಧನರಾದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಾಗಿ ಕಾರ್ಕಳ ವಲಯದ ಕಪ್ಪೆಟ್ಟು, ಬೈಂದೂರು ವಲಯದ ಮೊಗೇರಿ, ಮಡಿಕಲ್ ಸೇರಿದಂತೆ ಹಲವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ, ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿ ಅಪಾರ ಶಿಷ್ಯವೃಂದ ಹೊಂದಿದ್ದರು. ಬೈಂದೂರು ವಲಯ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿ, ಬಿಲ್ಲವ ಸಮಾಜದ ಸಂಘಟನೆಗಾಗಿ ಶ್ರಮಿಸಿದ್ದರು.
ಅವರಿಗೆ ಪತ್ನಿ ನಿವೃತ್ತ ಮುಖ್ಯ ಶಿಕ್ಷಕಿ ಚಿಕ್ಕಮ್ಮ, ಮೂವರು ಪುತ್ರರು ಹಾಗೂ ಪುತ್ರಿ ಇದ್ದಾರೆ.

