Site icon Kundapra.com ಕುಂದಾಪ್ರ ಡಾಟ್ ಕಾಂ

ಸಾಸ್ತಾನ: ಶಿವಕೃಪಾ ಯುವಕ ಮಂಡಲದಿಂದ ಶಿವರಾತ್ರಿ ವಿಶೇಷ

??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಪ್ರಕೃತಿಯ ಮೇಲಿನ ಅನಾಚಾರದಿಂದ ವ್ಯತಿರಿಕ್ತ ಪರಿಣಾಮ ಅನುಭವಿಸುತ್ತಿದ್ದೇವೆ. ಇದು ಅತ್ಯಂತ ಶೋಚನೀಯ ವಿಚಾರವಾಗಿದೆ. ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಇದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ತಾ.ಪಂ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್ ಹೇಳಿದರು.

ಅವರು ಇಲ್ಲಿನ ಸಾಸ್ತಾನದ ಬ್ರಹ್ಮಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಶಿವಕೃಪಾ ಯುವಕ ಮಂಡಲ ಸಾಸ್ತಾನ ಶಿವರಾತ್ರಿ ಉತ್ಸವದ ಅಂಗವಾಗಿ ಹಮ್ಮಿಕೊಂಡ ಶಿವನಾದ ಸಾಂಸ್ಕೃತಿಕ ಪರ್ವ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿವಕೃಪಾ ಸಂಘಟನೆ ಪರಿಸರದ ಬಗ್ಗೆ ಹೆಚ್ಚಿನ ಒಲವು ತೊರುತ್ತಿದೆ. ಅದೇ ರೀತಿ ಪ್ರತಿಯೊರ್ವರು ಕಾಳಜಿ ವಹಿಸಿ ಮುಂದಾಗಬಹುದಾದ ಅನಾಹುತವನ್ನು ತಪಿಸಬಹುದು ಎಂದು ಶಿವಕೃಪಾ ಸಂಘಟನೆಗೆ ಶುಭಹಾರೈಸಿದರು.

ಕಾರ್ಯಕ್ರಮವನ್ನು ಹೊಂಬಾಡಿ ಮಂಡಾಡಿ ಗ್ರಾ.ಪಂ ಪಿಡಿಒ ಚಂದ್ರಕಾಂತ್  ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಉದ್ಯಮಿ ನಾಗೇಶ್ ಪೈ ವಹಿಸಿದ್ದರು.

ಸಭೆಯಲ್ಲಿ ಅಂತಾರಾಷ್ಟ್ರೀಯ ದೇಹದಾರ್ಢ್ಯ ಪಟು ಸುರೇಶ್ ಪೂಜಾರಿ ಪಾಂಡೇಶ್ವರ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅಭ್ಯಾಗತರಾಗಿ ಬ್ರಹ್ಮಲಿಂಗೇಶ್ವರ ದೇಗುಲದ ಮುಖ್ಯಸ್ಥ ಭಾಸ್ಕರ್ ತುಂಗ, ಸಾಲಿಗ್ರಾಮ ಶ್ರೀಗುರುನರಸಿಂಹ ದೇಗುಲದ ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ, ಶಿವಕೃಪಾ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಕೆ.ವಿ ಉಪಸ್ಥಿತರಿದ್ದರು.

ಯುವಕ ಮಂಡಲದ ರಾಘವೇಂದ್ರರಾಜ್ ಸ್ವಾಗತಿಸಿ, ಪ್ರಾಸ್ತಾವನೆ ಸಲ್ಲಿಸಿ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದ ನಂತರ ಮೂರು ಮುತ್ತು ಕಲಾವಿದರಿಂದ ಗುಜ್ರಿ ಗೋವಿಂದ ನಾಟಕ ಪ್ರದರ್ಶನ ಹಾಗೂ ಸ್ಥಳೀಯ ಅಂಗನವಾಡಿ ಪುಟಾಣಿಗಳಿಂದ ನೃತ್ಯ ವೈಭವ ಜರಗಿತು.

Exit mobile version