ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಸೈಕಲ್‌ನಲ್ಲಿ ತೆರಳುವ ವೇಳೆ ತಲೆಸುತ್ತು ಬಂದು ಬಿದ್ದು ಮೃತಪಟ್ಟ ಘಟನೆ ಸಾಲಿಗ್ರಾಮ ಡಿವೈನ್ ಪಾರ್ಕ್ ಬಳಿ ಸಂಭವಿಸಿದೆ.
ಇಲ್ಲಿನ ಪಾಂಡೇಶ್ವರ ಮೂಡಹಡು ನಿವಾಸಿ, ಮೇಸ್ತ್ರಿ ನಾರಾಯಣ ಪೂಜಾರಿ (69) ಮೃತ ವ್ಯಕ್ತಿ,
ಅವರು ಫೆ.18 ರಂದು ಸೈಕಲ್ ನಲ್ಲಿ ಕೆಲಸಕ್ಕೆ ಹೋಗುತ್ತಿರುವಾಗ ಸಾಲಿಗ್ರಾಮದ ಡಿವೈನ್ ಪಾರ್ಕ್ ಬಳಿ ಬಿದ್ದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಅಂಬ್ಯುಲೆನ್ಸ್ ನಲ್ಲಿ ಬ್ರಹ್ಮಾವರ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

