Kundapra.com ಕುಂದಾಪ್ರ ಡಾಟ್ ಕಾಂ

ಸಾಸ್ತಾನದಲ್ಲಿ ಉಚಿತ ನೇತ್ರ ತಪಾಸಣೆ, ವಾಕ್ ಮತ್ತು ಶ್ರವಣ ತಪಾಸಣಾ ಶಿಬಿರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ವಾಕ್ ಮತ್ತು ಶ್ರವಣ ತಪಾಸಣಾ ಶಿಬಿರವು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿತು.

ಕಾರ್ಯಕ್ರಮವನ್ನು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷೆ ಜ್ಯೋತಿ ಉದಯ ಕುಮಾರ್, ಸಾಮಾಜಿಕ ಕಾರ್ಯಕರ್ತ ಐರೋಡಿ ವಿಠ್ಠಲ್ ಪೂಜಾರಿ, ಪಾಂಡೇಶ್ವರ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷೆ ಲಿಲಾವತಿ ಗಂಗಾಧರ ಮತ್ತಿತರರು ಉಪಸ್ಥಿತರಿದ್ದರು.

ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ರಾಘವೇಂದ್ರ ರಾವ್ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಆರೋಗ್ಯ ಕೇಂದ್ರದ ರಜನಿ ಕಾರ್ಯಕ್ರಮ ನಿರೂಪಿಸಿ, ಫಾರ್ಮಸಿ ಅಧಿಕಾರಿ ಸೀಮಾ ಮ್ಯಾಥ್ಯೂ ವಂದಿಸಿದರು.

Exit mobile version