ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ ಶಿಕ್ಷಕರ ಸಭೆಯು ಸಂಸ್ಥೆಯ ಕಾರ್ಯದರ್ಶಿಗಳಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕುಂದಾಪುರ ಪೋಲಿಸ್ ಸಬ್ ಇನ್ಸಪೆಕ್ಟರ್‌ಯಾದ ನಂಜಾ ನಾಯ್ಕ್ ಎನ್., ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, 9ನೇ ತರಗತಿ ಪರೀಕ್ಷಾ ತಯಾರಿಯಲ್ಲಿ ಪೋಷಕರ ಪಾತ್ರ ಹಾಗೂ ಮೊಬೈಲ್ ಫೋನಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪೋಷಕರು ತಮ್ಮ ಮಕ್ಕಳ ದೈನಂದಿನ ಚಟುವಟಿಕೆಗಳ ಬಗ್ಗೆ ಗಮನಹರಿಸಿ, ತಾವೇ ಅವರಿಗೆ ಮಾದರಿಯಾಗಿದ್ದು, ಅವರನ್ನು ದೇಶದ ಉತ್ತಮ ನಾಗರಿಕರನ್ನಾಗಿ ರೂಪಿಸಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಹಾಗೂ ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಹ ಶಿಕ್ಷಕಿ ನೇತ್ರಾವತಿ ನಿರೂಪಿಸಿ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಸಂಯೋಜಕ ಶಿಕ್ಷಕರಾದ ಮಾಧವ ವಂದಿಸಿದರು.