Kundapra.com ಕುಂದಾಪ್ರ ಡಾಟ್ ಕಾಂ

ಬಸ್ರೂರು ಶ್ರೀ ಶಾರದಾ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ 2025-26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಹಳ್ಳಿಹೊಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಳುಗೋಡು ಎಂಬಲ್ಲಿ ಜರುಗಿತು.

ಕಮಲಶಿಲೆ ಬ್ರಾಹ್ಮಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಎಸ್. ಸಚ್ಚಿದಾನಂದ ಛಾತ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಪಡೆದ ಅನುಭವವನ್ನು ತಮ್ಮ ವ್ಯಾಸಂಗದ ನಂತರವು ಸೇವೆ, ಅನುಕಂಪದ ಸಾರ್ಥಕ ಜೀವಿಯಾಗಬೇಕು. ಆ ಮೂಲಕ ಹಳ್ಳಿಗಳ ಉದ್ಧಾರದ ನೆಲೆಯಲ್ಲಿ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ಎಸ್. ಅನುಪಮ ಶೆಟ್ಟಿ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶಿಬಿರದಲ್ಲಿ ತೊಡಗಿಕೊಳ್ಳುವುದರಿಂದ ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಕಲಿತು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬದುಕನ್ನು ಕಟ್ಟಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಜುನಾಥ ಶೆಟ್ಟಿ, ನಾಗೇಶ್ ನಾಯ್ಕ್ ಶ್ರೀನಿವಾಸ ಆಚಾರಿ, ಕೃಷ್ಣ ಛಾತ್ರಾ, ಪ್ರದೀಪ್ ಕೊಠಾರಿ, ಉಷಾಲತಾ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕರಾದ ಡಾ. ರವಿಚಂದ್ರ ಸ್ವಾಗತಿಸಿ, ಉಪನ್ಯಾಸಕ ಅಕ್ಷಯ್ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿ, ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ವಂದಿಸಿದರು.

Exit mobile version