ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಎಂ.ಜಿ.ಎಂ ಸಂಧ್ಯಾ ಕಾಲೇಜು ಮತ್ತು ಐಸಿಎಐ ಉಡುಪಿ ಶಾಖೆ (SIRC) ಅವರ ಸಂಯುಕ್ತ ಆಶ್ರಯದಲ್ಲಿ “ಕೇಂದ್ರ ಬಜೆಟ್ ವಿಶ್ಲೇಷಣೆ” ಕುರಿತು ವಿದ್ಯಾರ್ಥಿ ವಿಚಾರ ಸಂಕಿರಣ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಸಿಎ ವೆಂಕಟರಮಣ ಕಾಮತ್ ಅವರು ಭಾಗವಹಿಸಿ ಕೇಂದ್ರ ಬಜೆಟ್‌ನ ಪ್ರಮುಖ ಅಂಶಗಳು, ಆರ್ಥಿಕ ಪರಿಣಾಮಗಳು ಹಾಗೂ ವಿದ್ಯಾರ್ಥಿಗಳಿಗೆ ಅದರ ಮಹತ್ವದ ಕುರಿತು ಸಮಗ್ರವಾಗಿ ವಿವರಿಸಿದರು.
ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್ ನಾಯಕ್ ಅವರು ಮಾತನಾಡಿ, ಇಂತಹ ವಿಚಾರ ಸಂಕಿರಣಗಳು ವಿದ್ಯಾರ್ಥಿಗಳಲ್ಲಿ ಆರ್ಥಿಕ ಜ್ಞಾನವನ್ನು ವಿಸ್ತರಿಸಲು ಸಹಕಾರಿ ಎಂದು ಅಭಿಪ್ರಾಯಪಟ್ಟರು.
ಬಿ.ಕಾಂ ಮತ್ತು ಬಿಬಿಎ ಸಂಯೋಜಕರಾದ ಡಾ. ಮಲ್ಲಿಕಾ ಎ ಶೆಟ್ಟಿ ಹಾಗೂ ಬಿಸಿಎ ಸಂಯೋಜಕರಾದ ಡಾ. ಎಂ. ವಿಶ್ವನಾಥ ಪೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಎಸ್‌ಐಸಿಎಎಸ್‌ಎ ಖಜಾಂಚಿ ಅಶ್ವಥ್ ಶೆಟ್ಟಿ ಅತಿಥಿ ಪರಿಚಯ ನೀಡಿದರು. ಐಸಿಎಐ ಉಡುಪಿ ಶಾಖೆಯ ಎಸ್‌ಐಸಿಎಎಸ್‌ಎ ಅಧ್ಯಕ್ಷರಾದ ಸಿಎ ಮಾಧುರಿ ಪ್ರಭು ಅವರು ಅತಿಥಿಗಳನ್ನು ಸ್ವಾಗತಿಸಿ, ಎಸ್‌ಐಸಿಎಎಸ್‌ಎ ಕಾರ್ಯದರ್ಶಿಯಾದ ಚಂದ್ರ ಎಸ್. ನಿರೂಪಿಸಿ, ವಾಣಿಜ್ಯ ಮತ್ತು ನಿರ್ವಹಣಾ ಸಂಘದ ಸಂಯೋಜಕರಾದ ಕಾವ್ಯಶ್ರೀ ಅವರು ಧನ್ಯವಾದ ಗೈದರು.

