Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಎನ್‌ಎಸ್‌ಎಸ್‌ ಶಿಬಿರದಲ್ಲಿ ಮಡಿಕೆ ತಯಾರಿ ಪ್ರಾತ್ಯಕ್ಷಿಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದಲ್ಲಿ ಮಡಿಕೆ ತಯಾರಿ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಇತ್ತೀಚೆಗೆ ಯಡಾಡಿ-ಮತ್ಯಾಡಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಮಾರು 100 ಸ್ವಯಂಸೇವಕರು ಸಾಂಪ್ರದಾಯಿಕವಾಗಿ ಮಡಿಕೆ ತಯಾರಿಕೆ ಮಾಡುವ ಬಗ್ಗೆ ತಿಳಿದುಕೊಂಡರು.

ಮಡಿಕೆ ತಯಾರಿಕೆಯ ಪ್ರಾತ್ಯಕ್ಷಿಕೆಯನ್ನು ಗಂಗೆ ಕುಲಾಲ್ತಿ ಯಡಾಡಿ ಅವರು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ನಿರ್ವಹಣಾ ವಿಭಾಗದ ಸಹ ಪ್ರಾಧ್ಯಾಪಕ ಪ್ರವೀಣ್ ಮೊಗವೀರ ಗಂಗೊಳ್ಳಿ, ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಹರೀಶ್ ಕಾಂಚನ್, ಸಿಸ್ಟಮ್ ನಿರ್ವಾಹಕ ರಕ್ಷಿತ್ ಕಾಂಚನ್, ಕುಶ ಪೂಜಾರಿ, ಶಿಬಿರಾಧಿಕಾರಿಗಳಾದ ರಾಜೇಶ್ ಶೆಟ್ಟಿ ವಕ್ವಾಡಿ ಮತ್ತು ಪೂಜಾ ಕುಂದರ್, ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version