Kundapra.com ಕುಂದಾಪ್ರ ಡಾಟ್ ಕಾಂ

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನಿಂದ 2.50 ಕೋಟಿ ರೂ. ವೆಚ್ಚದಲ್ಲಿ 14 ಮನೆಗಳ ಭೂಮಿಪೂಜೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್‌ನಿಂದ ಕೊರಗರ ಕುಟುಂಬಗಳಿಗೆ ಮನೆಯನ್ನು ನಿರ್ಮಿಸಿಕೊಡುವ ಮೂಲಕ ಮಹಾತ್ಕಾರ್ಯವನ್ನು ಮಾಡು ತ್ತಿದ್ದಾರೆ. ಸೊರಗುತ್ತಿರುವ ಸಮಾಜಕ್ಕೆ ಸೂರು ನಿರ್ಮಿಸಿಕೊಡುತ್ತಿರುವುದು ಪುಣ್ಯ ಕಾರ್ಯವೆಂದು ಉಡುಪಿ, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ಅವರು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ ಇವರಿಂದ ಕುಂದಾಪುರ ತಾಲೂಕಿನ ಅಮಾಸೆಬೈಲು ಕೊರಗರ ಕಾಲೋನಿಯಲ್ಲಿ 2.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ 14 ಮನೆಗಳ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನೆ ನಿರ್ಮಾಣದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಟ್ರಸ್ಟ್ ಅಧ್ಯಕ್ಷ ಡಾ. ಎಚ್.ಎಸ್. ಶೆಟ್ಟಿ ಮಾತನಾಡಿ, ಟ್ರಸ್ಟ್‌ನಿಂದ ಕೊರಗ 100 ಮನೆಗಳ ಕುಟುಂಬಗಳಿಗೆ ನಿರ್ಮಾಣದ ಗುರಿ ಹೊಂದಿದ್ದು, ಅಮಾಸೆಬೈಲ್‌ನಲ್ಲಿ ಮೂರನೇ ಹಂತದ ಮನೆ ನಿರ್ಮಾಣ ಕಾರ್ಯವಾಗುತ್ತಿದೆ ಎಂದರು.

ಶಾಸಕ ಕಿರಣ್ ಕುಮಾರ್ ಕೊಡ್ಲಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಂಸದ ವಿನಯ್ ಕುಮಾರ್ ಸೊರಕೆ, ಸಾಮಾಜಿಕ ಕಾರ್ಯಕರ್ತ ವಾದಿರಾಜ್ ಸಮನ್ವಯ ಬೆಂಗಳೂರು, ಕಮಲಶಿಲೆ ದೇವಳದ ಆಡಳಿತ ಮೊಕ್ತಸರ ಸಚ್ಚಿದಾನಂದ ಚಾತ್ರ, ಚಿತ್ರದುರ್ಗ ಮಾದಾರ ಚೆನ್ನಯ್ಯ ಗುರುಪೀಠದ ಟ್ರಸ್ಟಿ ಗುರುನಾಥ ದಾನಪ್ಪ, ಸಾಮಾಜಿಕ ಕಾರ್ಯಕರ್ತ ವಾದಿರಾಜ ಸಮನ್ವಯ, ಸಮಾಜ ಸೇವಕ ಮುರಳಿ ಕಡೆಕಾರ್, ಕೊರಗಾಭಿವೃದ್ಧಿ ಸಂಸ್ಥೆಗಳ ಒಕ್ಕೂಟದ ಕುಮಾರ್‌ದಾಸ್ ಹಾಲಾಡಿ, ಉದ್ಯಮಿ ಸಚ್ಚಿದಾನಂದ ಶೆಟ್ಟಿ ಅಮಾಸೆಬೈಲು ಗ್ರಾಮ ಪಂಚಾಯಿತಿ ಪಿಡಿಓ ಸ್ವಾಮಿನಾಥ್, ಟ್ರಸ್ಟ್ ಉಪಾಧ್ಯಕ್ಷ ಹಾಲಾಡಿ ನಾಗರಾಜ ಶೆಟ್ಟಿ ಕಾವ್ಯದರ್ಶಿ ಡಾ. ಸುಮನಾ ಎಸ್. ಶೆಟ್ಟಿ ಉಪಸ್ಥಿತರಿದ್ದರು.

ಟ್ರಸ್ಟ್ ಅಧ್ಯಕ್ಷ ಡಾ. ಎಚ್.ಎಸ್.ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಪತ್ರಕರ್ತ ಸತೀಶ್ ಆಚಾರ್ ಉಳ್ಳೂರು ಸ್ವಾಗತಿಸಿ, ವಂದಿಸಿದರು.

Exit mobile version