Site icon Kundapra.com ಕುಂದಾಪ್ರ ಡಾಟ್ ಕಾಂ

ಬ್ರಹ್ಮಾವರ: ಹಿರಿಯ ಪತ್ರಕರ್ತ ಹಾಗೂ ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಆತ್ಮಹತ್ಯೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬ್ರಹ್ಮಾವರ:
ತಾಲೂಕಿನ ಹಿರಿಯ ಪತ್ರಕರ್ತ ಹಾಗೂ ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ಅವರು ಶನಿವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲರಾಗಿದ್ದ ಶೇಷಗಿರಿ ಭಟ್ ಅವರು ಆರೂರು ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗುತ್ತಿದ್ದರೂ, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಬ್ರಹ್ಮಾವರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಮೃತರು ಹೆಂಡತಿ, ಓರ್ವ ಪುತ್ರ ಹಾಗೂ ತಂದೆ – ತಾಯಿ ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Exit mobile version