Kundapra.com ಕುಂದಾಪ್ರ ಡಾಟ್ ಕಾಂ

ವಿದ್ಯಾರ್ಥಿಗಳು ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಿ: ಸಂದೇಶ್ ಶೆಟ್ಟಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಭಾರತೀಯ ಸಂವಿಧಾನ ಬದುಕಿನ ಕೈಪಿಡಿಯಾಗಬೇಕು. ವಿದ್ಯಾರ್ಥಿಗಳು ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಮಾಹಿತಿ= ಪಡೆದುಕೊಳ್ಳಬೇಕು. ದಿನನಿತ್ಯದ ಬದುಕಿನಲ್ಲಿ ಕಾನೂನಿನ ಅರಿವು ಅತ್ಯಂತ ಅಗತ್ಯ ಎಂದು ಕುಂದಾಪುರದ ನ್ಯಾಯವಾದಿ ಸಂದೇಶ್ ಶೆಟ್ಟಿ ಹೇಳಿದರು.

ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಶ್ರೀ ವಿನಾಯಕ ಸಭಾಭವನದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದಲ್ಲಿ ಕಾನೂನು ಅರಿವು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದರು.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೊಯ್ಕಾಡಿಯ ಬಜಾಜ್ ಎಲಿಯನ್ಸ್ ಡೆವಲಪ್ಮೆಂಟ್ ಆಫೀಸರ್ ಸುದರ್ಶನ್ ಶೆಟ್ಟಿ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ನ ನಿವೃತ್ತ ಮ್ಯಾನೇಜರ್ ರಮೇಶ್ ಮೊಗವೀರ ಗುಡ್ಡೆಯಂಗಡಿ, ಶಾರದೋತ್ಸವ ಸಮಿತಿಯ ಸದಸ್ಯ ಸುರೇಶ್ ಪೂಜಾರಿ ಹುಣ್ಸೆಮಕ್ಕಿ, ಸ.ಹಿ.ಪ್ರಾ. ಶಾಲೆ, ಯಡಾಡಿ-ಮತ್ಯಾಡಿಯ ಎಸ್.ಡಿ.ಎಮ್.ಸಿ. ಸದಸ್ಯರಾದ ಪವಿತ್ರ ಹಾಗೂ ಶಾಂತ, ದಿನೇಶ್ ಪೂಜಾರಿ ಹಳ್ನಿರು, ಶರತ್ ಕುಲಾಲ್ ಯಡಾಡಿ ಹಾಗೂ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷರಾದ ಶಿವರಾಮ್ ಮೊಗವೀರ, ಮಂಜುನಾಥ್ ಕುಲಾಲ್ ಗುಡ್ಡೆಯಂಗಡಿ ಹಾಗೂ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಶಿವಾನಿ ಅಡಿಗ ಉಪಸ್ಥಿತರಿದ್ದರು.

ಎನ್.ಎಸ್.ಎಸ್. ಸ್ವಯಂಸೇವಕರಾದ ವಿಕಾಸ್ ಸ್ವಾಗತಿಸಿ, ಸೌರವ ವಂದಿಸಿ, ಚಿರಂತ್ ಕಾರ್ಯಕ್ರಮ ನಿರ್ವಹಿಸಿದರು.

Exit mobile version