Kundapra.com ಕುಂದಾಪ್ರ ಡಾಟ್ ಕಾಂ

ವಿಧಾನಪರಿಷತ್ ಚುನಾವಣೆ: ಕುಂದಾಪುರದಲ್ಲಿ ಶೇ.99.71 ಮತದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿಧಾನಪರಿಷತ್ ನ ಸ್ಥಳಿಯಾಡಳಿತ ಪ್ರತಿನಿಧಿಗಳಿಗಾಗಿ ನಡೆದ ಚುನಾವಣೆಯು ಕುಂದಾಪುರ ತಾಲೂಕಿನಲ್ಲಿ ಶಾಂತಿಯುತವಾಗಿ ನಡೆದಿದ್ದು, 97 ಪ್ರತಿಶತ ಮತದಾನವಾದ ಬಗ್ಗೆ ಮಾಹಿತಿ ಲಭ್ಯವಾಗಿದೆ.

ತಾಲೂಕಿನಲ್ಲಿ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಪುರಸಭೆ ಸದಸ್ಯರು ಇಬ್ಬರು ವಿಧಾನಸಭಾ ಸದಸ್ಯರು ಹಾಗೂ ಒಬ್ಬರು ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಒಟ್ಟು 1019ಮತಗಳಿದ್ದು ಆ ಪೈಕಿ ಒಟ್ಟು 67 ಮತಗಟ್ಟೆಯಗಳಲ್ಲಿ ಶೇ. 99.71ರಷ್ಟು ಮತದಾನ ನಡೆದಿದೆ. ಬೆಳಿಗ್ಗೆ ಎಂಟು ಗಂಟೆಗೆ ಆರಂಭಗೊಂಡ ಮತದಾನ ಪ್ರಕ್ರಿಯೆ ಹತ್ತು ಗಂಟೆಯ ವೇಳೆಗೆ ಬಿರುಸುಗೊಂಡು ಮಧ್ಯಾಹ್ನ ಮೂರು ಗಂಟೆಯ ವೇಳೆಗೆ ಬಹುಪಾಲು ಮುಗಿದಿತ್ತು. ಎಲ್ಲಿಯೂ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ. (ಕುಂದಾಪ್ರ ಡಾಟ್ ಕಾಂ)

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ, ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಪ್ರತಾಪಚಂದ್ರ ಶೆಟ್ಟಿ ಕುಂದಾಪುರ ತಾಲೂಕು ಪಂಚಾಯಿತಿ ಮತಘಟ್ಟೆಯಲ್ಲಿ ತಮ್ಮ ಅಭ್ಯರ್ಥಿಗಳಿಗೆ ಮತ ಹಾಕಿದರೇ, ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

Post on 4:10pm Updated on  7:00pm

Exit mobile version