Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಮೀನುಗಾರಿಕೆ ವೇಳೆ ದೋಣಿಯಲ್ಲಿ ಆಯತಪ್ಪಿ ಬಿದ್ದು ಮೀನುಗಾರ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಇಲ್ಲಿನ ದಾಕುಹಿತ್ತುನಿಂದ ಮೀನುಗಾರಿಕೆಗೆ ತೆರಳಿದ್ದಾಗ ಭಾರೀ ಗಾಳಿಗೆ ದೋಣಿಯೊಳಗೆ ಆಯತಪ್ಪಿ ಬಿದ್ದು, ಎದೆ ನೋವಿನಿಂದ ಅಸ್ವಸ್ಥಗೊಂಡಿದ್ದ ಗಂಗೊಳ್ಳಿಯ ಜಗನ್ನಾಥ ‌ಖಾರ್ವಿ (43) ಅವರು ಚಿಕಿತ್ಸೆಗೆ ಸ್ಪಂದಿಸದೆ ರವಿವಾರ ಸಾವನ್ನಪ್ಪಿದ್ದಾರೆ.

ಫೆ.27ರ ಬೆಳಗ್ಗೆ ಅವರು ಇನ್ನಿತರ ಮೀನುಗಾರರೊಂದಿಗೆ ಗಣಮಣಿ ಪ್ರಸಾದ್‌ ಎನ್ನುವ ನಾಡದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ದಾಕುಹಿತ್ತುನಿಂದ ಸುಮಾರು 5 ಮಾರು ದೂರದ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಭಾರೀ ಗಾಳಿ ಬಂದಿದ್ದರಿಂದ ಅವರು ದೋಣಿಯಲ್ಲಿ ಆಯತಪ್ಪಿ ಬಿದ್ದಿದ್ದರು. ಎದೆ ನೋವು ಕಾಣಿಸಿಕೊಂಡ ಅವರನ್ನು ದೋಣಿಯಲ್ಲಿದ್ದವರು ಗಂಗೊಳ್ಳಿ ಬಂದರಿಗೆ ಕರೆದುಕೊಂಡು ಬಂದು, ಅಲ್ಲಿಂದ ಆ್ಯಂಬುಲೆನ್ಸ್ ನಲ್ಲಿ ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version