Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಕ್ತದಾನ ಶಿಬಿರ – 208 ಯುನಿಟ್ ರಕ್ತ ಸಂಗ್ರಹ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ  ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಎನ್.ಸಿ.ಸಿ (ನೌಕಾದಳ ಮತ್ತು ಭೂದಳ), ರೆಡ್ ಕ್ರಾಸ್ ಘಟಕ, ರೇಂಜರ್ಸ್ ಮತ್ತು ರೋವರ್ಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಲಯನ್ಸ್ ಕ್ಲಬ್ ಹಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ” ಸ್ವಯಂ ಪ್ರೇರಿತ ರಕ್ತದಾನ ಶಿಬಿರ” ಇತ್ತೀಚಿಗೆ ನಡೆಯಿತು.

ಹಂಗಳೂರು ಲಯನ್ಸ್ ಕ್ಲಬ್ ಇದರ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಯಕರ ಶೆಟ್ಟಿ ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು.

ವೇದಿಕೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಖಜಾಂಚಿ ಶಿವರಾಮ ಶೆಟ್ಟಿ, ಲಯನ್ಸ್ ಕ್ಲಬ್ ಹಂಗಳೂರು ಇದರ ಕಾರ್ಯದರ್ಶಿಗಳಾದ ವಿಲ್ಫ್ರೆಡ್ ಮೆನೆಜರ್ಸ್ಯ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿ ಅರುಣ್ ಎ.ಎಸ್, ರಾಮಚಂದ್ರ ಆಚಾರಿ , ಎನ್.ಸಿ.ಸಿ ಅಧಿಕಾರಿಗಳಾದ ಶರಣ್ ಎಸ್.ಜೆ, ಅಂಜನ್ ಕುಮಾರ್ ಎ.ಎಲ್, ರೇಂಜರ್ಸ್ ಮತ್ತು ರೋವರ್ಸ್ ಅಧಿಕಾರಿಗಳಾದ ರಿತಿನ್ ಕುಮಾರ್ ಮತ್ತು ಅಕ್ಷತಾ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಪಲ್ಲವಿ ಕಾರ್ಯಕ್ರಮ ನಿರೂಪಿಸಿ, ಕಾಲೇಜಿನ ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶದ ಸಂಯೋಜಕರಾದ ಸತ್ಯನಾರಾಯಣ ಸ್ವಾಗತಿಸಿ, ಯೂಥ್ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಆಧಿಕಾರಿ ವಿದ್ಯಾರಾಣಿ ವಂದಿಸಿದರು. 208 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Exit mobile version