Site icon Kundapra.com ಕುಂದಾಪ್ರ ಡಾಟ್ ಕಾಂ

ವಾಕಿಂಗ್‌ಗೆ ತೆರಳಿದ ವ್ಯಕ್ತಿ ಕುಸಿದು ಬಿದ್ದು ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಬೆಳಗಿನ ಸಮಯದಲ್ಲಿ ವಾಕಿಂಗ್ ಮಾಡುತ್ತಿದ್ದಾಗ ಕುಸಿದು ಬಿದ್ದ ವ್ಯಕ್ತಿ ಚೇತರಿಸಿಕೊಂಡು ಮನೆಗೆ ಬಂದವರು ಮತ್ತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಲ್ಲಿನ ಉಪ್ಪುಂದ ಗ್ರಾಮದಲ್ಲಿ ಸಂಭವಿಸಿದೆ.

ಉಪ್ಪುಂದ ಗ್ರಾಮದ ಜನತಾ ಕಾಲೋನಿ ಪುಟ್ಟಮನೆ ಸೀತಾರಾಮ ಖಾರ್ವಿ (52) ಮೃತಪಟ್ಟ ವ್ಯಕ್ತಿ.

ಮಾ.2ರಂದು ಬೆಳಗ್ಗೆ ವಾಕಿಂಗ್ ಮುಗಿಸಿ ಮನೆಗೆ ಬಂದಿದ್ದು ಅವರು ಮನೆಯವರಲ್ಲಿ ವಾಕಿಂಗ್ ಮಾಡುವಾಗ ದಾರಿ ಮಧ್ಯೆ ಕುಸಿದು ಬಿದ್ದು ಸುಧಾರಿಸಿಕೊಂಡು ಬಂದಿರುವುದಾಗಿ ತಿಳಿಸಿದ್ದರು. ಮನೆಯವರ ಬಳಿ ಮಾತನಾಡಿದ ಸ್ವಲ್ಪ ಸಮಯದ ಬಳಿಕ ಮತ್ತೆ ಕುಸಿದು ಬಿದ್ದು ತೀವ್ರ ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಬೈಂದೂರು ಸಮುದಾಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಈಗಾಗಲೇ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿದರು.

ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version