Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ – 238 ಯೂನಿಟ್ ರಕ್ತ ಸಂಗ್ರಹ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ, ಎನ್.ಎಸ್.ಎಸ್. ಮತ್ತು ಎನ್.ಸಿ.ಸಿ. ಘಟಕಗಳ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ, ಕುಂದಾಪುರ ಹಾಗೂ ಲಯನ್ಸ್ ಕ್ಲಬ್, ಕುಂದಾಪುರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.

ಕುಂದಾಪುರ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಸಭಾಪತಿ ಜಯಕರ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು. ರೆಡ್‌ಕ್ರಾಸ್ ಸೊಸೈಟಿಯ ಕಾರ್ಯವೈಖರಿ ಹಾಗೂ ರಕ್ತದಾನ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಲಯನ್ ಇಂಟರ್‌ನ್ಯಾಷನಲ್ ಜಿಲ್ಲೆ 317Cಯ ಪ್ರಥಮ ಉಪ ಗವರ್ನರ್ MJF ಲಯನ್ ರಾಜೀವ ಕೋಟ್ಯಾನ್ ಹಾಗೂ ಲಯನ್ಸ್ ಕ್ಲಬ್ ಕುಂದಾಪುರ ಅಧ್ಯಕ್ಷ ಲಯನ್ ಸದಾನಂದ ನಾವಡ ಮುಖ್ಯ ಅತಿಥಿ ನೆಲೆಯ ಮಾತುಗಳನ್ನಾಡಿದರು. ಲಯನ್ಸ್ ಕ್ಲಬ್, ಕುಂದಾಪುರ ಇದರ ಕಾರ್ಯದರ್ಶಿ ಕಾಲೇಜು ಆಡಳಿತ ಮಂಡಳಿಯ ಸದಸ್ಯ ಹು0ತ್ರಿಕೆ ಸುಧಾಕರ್ ಶೆಟ್ಟಿ ಆಶಯ ನುಡಿಗಳನ್ನಾಡಿದರು.

ಈ ಸಂದರ್ಭ ಸಂಸ್ಥೆಯ ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್, ಖಜಾಂಚಿ ಶಿವರಾಮ ಶೆಟ್ಟಿ, ಲಯನ್ಸ್ ಕ್ಲಬ್ ಸದಸ್ಯ ಪ್ರಕಾಶ್, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ರಾಜೇಶ್ ಶೆಟ್ಟಿ, ಎನ್.ಸಿ.ಸಿ. ಅಧಿಕಾರಿ ಲೆಫ್ಟಿನೆಂಟ್ ಹರೀಶ್ ಬಿ. ಉಪಸ್ಥಿತರಿದ್ದರು.

ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ 238 ಯೂನಿಟ್ ರಕ್ತವನ್ನು ಸಂಗ್ರಹಿಸುವ ಮೂಲಕ ದಾಖಲೆ ಬರೆಯಲಾಯಿತು. ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕ ಯೋಗೀಶ್ ಶಾನುಭೋಗ್ ಸ್ವಾಗತಿಸಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಪೂಜಾ ಕುಂದರ್ ವಂದಿಸಿ, ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕಿ ಪೃಥ್ವಿಶ್ರೀ ಜಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Exit mobile version