Site icon Kundapra.com ಕುಂದಾಪ್ರ ಡಾಟ್ ಕಾಂ

ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಮೂಡುಬಿದಿರೆ:
2026 ಜನವರಿಯಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಿರಿಯ ವಿದ್ಯಾರ್ಥಿಗಳಾದ ರೋಹಿತ್ ಪಾರಡ್ಕರ್, ಅಮೋಘ್, ಗಣೇಶ್ ಪೈ, ಶುಭಂ ಕೋಟ್ಯಾನ್, ಸುಬ್ರಮಣ್ಯ ಎಸ್. ಬಿ. ಮತ್ತು ಭರತ್ ಹೆಗ್ಡೆ ಅವರು ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ.

ಅವರು ಸಿ.ಎ. ಅಂತಿಮ ಪರೀಕ್ಷೆಯ ಗ್ರೂಪ್-01 ಮತ್ತು ಗ್ರೂಪ್-02 ಎರಡೂ ವಿಭಾಗಗಳಲ್ಲಿ ಉತ್ತೀರ್ಣರಾಗಿ ಈ ಸಾಧನೆಯನ್ನು ಮಾಡಿದ್ದಾರೆ.

ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಪ್ರಾಂಶುಪಾಲ ಡಾ. ಕುರಿಯನ್ ಹಾಗೂ ಸಿ.ಎಸ್. ಸಂಯೋಜಕರು ಅಭಿನಂದಿಸಿದ್ದಾರೆ.

Exit mobile version