Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಎನ್.ಎಸ್.ಎಸ್. ಶಿಬಿರದಲ್ಲಿ ಬೀದಿ ನಾಟಕ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಯಡಾಡಿ-ಮತ್ಯಾಡಿಯಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದಲ್ಲಿ ಜನಜಾಗೃತಿ ಕಾರ್ಯಕ್ರಮ ಭಾಗವಾಗಿ ಎನ್.ಎಸ್.ಎಸ್. ಸ್ವಯಂಸೇವಕರು ಬಿದ್ಕಲ್‌ಕಟ್ಟೆ ಮತ್ತು ಸ್ಥಳೀಯ ಭಾಗದಲ್ಲಿ ಪರಿಸರ ಕಾಳಜಿಯ ಬೀದಿನಾಟಕ ಪ್ರದರ್ಶಿಸಿದರು.

ಈ ಸಂದರ್ಭ ಎನ್.ಎಸ್.ಎಸ್. ಶಿಬಿರಾಧಿಕಾರಿಗಳು, ಸ್ವಯಂಸೇವಕರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು. 


Exit mobile version